ಬಂಟ್ವಾಳ: ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ಜೂ. 21 ರಂದು ಯೋಗ ದಿನಾಚರಣೆ ನಡೆಯಲಿದೆ. ರಾಂಪ್ರಸಾದ್ ಕೊಂಬಿಲ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕಡಬ ವೆಂಕಟ್ರಮಣ ಭಟ್ ಯೋಗ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಲಿದ್ದಾರೆ ಹಾಗೂ ಭವಿಷ್ ಘಟಕದಿಂದ ವಿದ್ಯಾರ್ಥಿಗಳಿಗೆ ಪ್ರೇರಣಾ ಎಂಬ ಮೂರು ದಿನಗಳ ಆವಾಸೀಯ ಶಿಬಿರವು ಜೂ. 21 ರಿಂದ 23ರವರೆಗೆ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿರುವುದು. ಕಾರ್ಯಕ್ರಮವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಳಿತ ಮಂಡಳಿ ಸದಸ್ಯರಾದ ವಾಮನ ಪೈ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕ ವಸಂತ ಮಾಧವ ವಹಿಸಲಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಸದಸ್ಯ ಗಣಪತಿ ಹೆಗಡೆ ಪ್ರಸ್ತಾವನೆಗೈಯಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಉಪಸ್ಥಿತರಿರುತ್ತಾರೆ. ಸಮಾರೋಪ ಸಮಾರಂಭದಲ್ಲಿ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ಪುತ್ತೂರು ಇಲ್ಲಿನ ಖಜಾಂಚಿ ರಾಮ್‌ಪ್ರಸಾದ್ ಕರಿಯಾಲ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಸಮಾರೋಪ ಭಾಷಣ ಮಾಡಲಿದ್ದಾರೆ. ಸಹಸಂಚಾಲಕ ರಮೇಶ್ ಎನ್. ಗೌರವ ಉಪಸ್ಥಿತರಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

