Wednesday, January 28, 2026

ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ನೂತನ ಪ್ರಯೋಗ ವಿದ್ಯಾರ್ಥಿಗಳಿಂದಲೇ ಹಲಸು ಮೇಳ

ಬಂಟ್ವಾಳ: ಬಡವರ ಹಣ್ಣು ಎಂದೇ ಖ್ಯಾತಿ ಪಡೆದ, ಯಾವುದೇ ರಾಸಾಯನಿಕದ ಬಳಕೆಯಿಲ್ಲದೇ ಬೆಳೆದ ಒಂದು ಸಂಪೂರ್ಣ ಆಹಾರ ಹಲಸು. ಇಂದು ಬೇರೆ ಬೇರೆ ಪ್ರಯೋಗಕ್ಕೆ ಒಳಗಾಗಿ ವಿವಿಧ ಮುಖಗಳಲ್ಲಿ ಒಂದು ಪ್ರಮುಖ ಬೆಳೆಯೆಂದು ಗುರುತಿಸಲ್ಪಟ್ಟಿದೆ. ಇಂತಹ ಹಲಸನ್ನು ಆಧಾರವಾಗಿಟ್ಟು ಆಯೋಜಿಸಿದ ಹಲಸಿನ ಮೇಳದಿಂದಾಗಿ ಇಲ್ಲಿ ವಿಜ್ಞಾನದೊಂದಿಗೆ ಜೀವನ ವಿಜ್ಞಾನವನ್ನೂ ಬೋಧಿಸಿದಂತಾಗಿದೆ. ಇದು ಹಲಸನ್ನು ಮೌಲ್ಯವರ್ಧಿತಗೊಳಿಸುವ ಪ್ರಯೋಗಾತ್ಮಕವಾದ ಕಾರ್ಯಕ್ರಮವಾದರೂ ಮುಂದೆ ಇದೊಂದು ಕ್ರಾಂತಿಕಾರಕ ಬದಲಾವಣೆ ತರಬಲ್ಲ ಹೆಜ್ಜೆಯಾಗಿದೆ. ಆಧುನಿಕ ಕಾಲಕ್ಕೆ ಬೇಕಾದಂತೆ ಹಲಸು ತನ್ನ ಮೌಲ್ಯವರ್ಧಿಸಿಕೊಂಡು ಬೆಳೆಯುತ್ತಿರುವುದು ಶ್ಲಾಘನೀಯ. ಇದಕ್ಕೆ ಇಂತಹ ಹಲಸುಮೇಳಗಳು ಪೂರಕಕ್ತಿಯನ್ನು ಒದಗಿಸಿದೆ ಎಂದು ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ದಶಮಾನೋತ್ಸವದ ಪ್ರಯುಕ್ತ ಆಯೋಜಿಸಿದ ಹಲಸು ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಕ್ಯಾಂಪ್ಕೋ ಅಧ್ಯಕ್ಷ ಸತೀಶ್ಚಂದ್ರ, ಮಾತನಾಡಿದರು.


ಹಲಸು ಕೇವಲ ಆಹಾರಕ್ಕೆ ಮಾತ್ರವಲ್ಲ ಆರೋಗ್ಯಕ್ಕೂ ಪೂರಕವಾದುದು ಹೋಮಾದಿಗಳಿಗೆ ಹಲಸಿನ ಚಕ್ಕೆ, ಎಲೆಯನ್ನು ಬಳಸಿ ತುಪ್ಪದೊಂದಿಗೆ ಬೆರೆಸಿ ಉಪಯೋಗಿಸಿದಾಗ ವಾತ ಮುಂತಾದ ರೋಗಗಳು ಗುಣವಾಗುತ್ತದೆ. ತರಕಾರಿಯಲ್ಲೂ ನಾವು ಕ್ರಾಂತಿಕಾರಕ ಪ್ರಯೋಗಗಳನ್ನು ಮಾಡಿ ಯಶಸ್ವಿಯಾಗಿದ್ದೇವೆ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾದರೆ ಉದ್ಯೋಗವನ್ನು ನಮ್ಮಲ್ಲೇ ಸೃಷ್ಟಿಸಿಕೊಂಡು ಬೆಳೆಯಬಹುದು ಎಂದು ಪ್ರಗತಿಪರ ಕೃಷಿಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯ ಸೇಡಿಯಾಪು ಜನಾರ್ಧನ ಭಟ್ ನುಡಿದರು.

ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಸ್ವಾಗತಿಸಿ, ರಾಜ್ಯಶಾಸ್ತ್ರ ಉಪನ್ಯಾಸಕಿ ಜಯಲಕ್ಷ್ಮೀ ವಂದಿಸಿ, ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಸ್ವರ್ಣಗೌರಿ ಕಾರ್ಯಕ್ರಮ ನಿರೂಪಿಸಿದರು.

More from the blog

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...