Friday, January 30, 2026

ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಶತಮಾನೋತ್ತರದ ನೆನಪು

ಬಂಟ್ವಾಳ : ಜಲಿಯನ್ ವಾಲಾಬಾಗ್‌ನಲ್ಲಿ ಬೈಸಾಕಿ ಕಾರ್ಯಕ್ರಮಕ್ಕೆ ಸೇರಿದ್ದ 2500 ಜನರಲ್ಲಿ ಸಾಮಾನ್ಯರ, ಮಹಿಳೆಯರ, ಮಕ್ಕಳ ಮತ್ತು ಅಮಾಯಕರ ಮೇಲೆ ಜನರಲ್ ಡಯರ್ ನಡೆಸಿದ ಏಕಾಏಕಿ ಗುಂಡಿನ ದಾಳಿಯು ಅಕ್ಷರಶಃ ನರಮೇಧ. ಈ ದುರಂತದ ನಂತರ ಸ್ವಾತಂತ್ರ್ಯದ ದಿಕ್ಕು ಬದಲಾಗಿ ಉಧಾಮ್ ಸಿಂಗ್, ಭಗತ್ ಸಿಂಗ್ ಮುಂತಾದ ಅಸಂಖ್ಯಾತ ಕ್ರಾಂತಿಕಾರಿಗಳ ಉಗಮಕ್ಕೆ ಕಾರಣವಾಯಿತು. ಈ ಹತ್ಯಾಕಾಂಡವು ಒಂದು ಬ್ರಿಟೀಷರ ಅಮಾನವೀಯ ಕೃತ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹ ಭೌದ್ಧಿಕ್ ಪ್ರಮುಖ್ ಕೃಷ್ಣಪ್ರಸಾದ ಇವರು ನುಡಿದರು.
ಶ್ರೀರಾಮ ಪ್ರಥಮದರ್ಜೆ ಕಾಲೇಜು ಕಲ್ಲಡ್ಕ ಇದರ ಮಾನವಿಕ ಸಂಘದಿಂದ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಶತಮಾನೋತ್ತರದ ನೆನಪು ಎಂಬ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ವಹಿಸಿದ್ದರು. ಮತ್ತು ಹಿರಿಯರಾದ ಕಮಲಾ ಪ್ರಭಾಕರ ಭಟ್, ಆಡಳಿತ ಮಂಡಳಿಯ ಸದಸ್ಯರಾದ ಸೂರ್ಯನಾರಾಯಣ ಕಶೆಕೋಡಿ, ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಇವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ದುರ್ಗಾಶ್ರೀ ದ್ವಿತೀಯ ಬಿ.ಎ ಸ್ವಾಗತಿಸಿ, ಶೀಬಾ ಅಂತಿಮ ಬಿ.ಎ ವಂದಿಸಿ, ನಿಖಿತಾ ಅಂತಿಮ ಬಿ.ಎ ಇವರು ನಿರೂಪಿಸಿದರು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...