Monday, January 26, 2026

ಫೆ.5 ರಂದು ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ “ವಿಶ್ವವ್ಯಾಪಿ ಭಾರತ” ರಾಜ್ಯಮಟ್ಟದ ವಿಚಾರ ಸಂಕಿರಣ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಶ್ರೀ ರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ವಿವಿಧ ವಿಶ್ವವಿದ್ಯಾನಿಲಯಗಳ ರಾಜ್ಯಮಟ್ಟದ ಎಂಟನೇ ವರ್ಷದ ವಿಶ್ವವ್ಯಾಪಿ ಭಾರತ ಎಂಬ ವಿಷಯದ ವಿಚಾರ ಸಂಕಿರಣ ಫೆ.5 ರಂದು ಮಂಗಳವಾರ ವೇದವ್ಯಾಸ ಧ್ಯಾನ ಮಂದಿರದಲ್ಲಿ ಜರಗಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಡಾ| ಪ್ರಭಾಕರ ಭಟ್ ಹೇಳಿದರು.
ಅವರು ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಖ್ಯಾತ ಚಿಂತಕ – ವಿದ್ವಾಂಸ ಶತಾವಧಾನಿ ಡಾ| ರಾ.ಗಣೇಶ್ ಅವರು ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಭಾರತ ಸಂಸ್ಕೃತಿಯ ವೈಶ್ವಿಕತೆ ಎಂಬ ವಿಷಯ ಮಂಡನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ಆರಂಭಿಕ ವರ್ಷಗಳಲ್ಲಿ ರಾಷ್ಟ್ರ ರಾಷ್ಟ್ರೀಯ ತೆ ಎಂಬ ವಿಚಾರದಿಂದ ಆರಂಭಗೊಂಡ ಈ ವಿಚಾರ ಸಂಕಿರಣ ಈ ವರೆಗೆ ದೇಶದ ಸತ್ಯ ಚರಿತ್ರೆಯ ಬಗ್ಗೆ ರಾಜ್ಯ ಮಟ್ಟದ ವಿಚಾರಸಂಕಿರಣಗಳು ನಿರಂತರವಾಗಿ ಕಳೆದ ಎಂಟು ವರ್ಷಗಳಿಂದ ನಡೆಯುತ್ತಿದೆ.
ಪ್ರತಿಯೊಬ್ಬರು ತಲೆ ಎತ್ತಿ ಸ್ವಾಭಿಮಾನದ ಬದುಕು ಸಾಗಿಸಬೇಕು ಎಂಬ ಮಹತ್ತರ ಉದ್ದೇಶದಿಂದ ಇಂತಹ ವಿಚಾರ ಸಂಕಿರಣಗಳನ್ನು ಆಯೋಜಿಸಲಾಗಿದೆ.

ನಾಲ್ಕು ಗುಂಪುಗಳಲ್ಲಿ ಅಗಮಿಸಿದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಚರ್ಚೆ ಮಾಡಲು ವ್ಯವಸ್ಥೆ ಮಾಡಲಾಗಿದೆ.
ವಿದ್ಯಾ ಕೇಂದ್ರದ ಅವರಣದಲ್ಲಿ 6000 ಚ.ಅಡಿಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಸಕಲ ವ್ಯವಸ್ಥೆಯ ತಯಾರಿ ನಡೆಯುತ್ತಿದೆ ಎಂದರು.

ಮಂಗಳೂರು ವಿಶ್ವವಿದ್ಯಾನಿಲಯಗಳ 62 ಕ್ಕೂ ಅಧಿಕ ಕಾಲೇಜು ಗಳ ಹಾಗೂ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳ ಅನೇಕ ಪ್ರತಿನಿಧಿಗಳು ನೊಂದಣಿ ಮಾಡಿಸಿದ್ದು, ಅಗಮಿಸುವ ಅವರಿಗೆ ವಸತಿ, ಉಟೋಪಚಾರದ ವ್ಯವಸ್ಥೆ ಗಳನ್ನು ಕಲ್ಪಿಸಲಾಗಿದೆ.
ಈ ಸಂದರ್ಭದಲ್ಲಿ ಶ್ರೀ ರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತಮಾದವ, ಸಹಸಂಚಾಲಕ ರಮೇಶ್ ಎನ್. ಪ್ರಾಂಶುಪಾಲ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು.

More from the blog

ಸಜೀಪಮೂಡ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ..

ಬಂಟ್ವಾಳ : ಸಜೀಪಮೂಡ ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪ ಬದಲಾವಣೆ ಮಾಡಿದ ವಿರುದ್ಧ ವಲಯ ಅಧ್ಯಕ್ಷ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ...

ಮಾಣಿಯಲ್ಲಿ ಹಿಂದೂ ಸಂಗಮ…

ಬಂಟ್ವಾಳ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಪ್ರಯುಕ್ತ ಮಾಣಿ ಪೆರಾಜೆ ಬರಿಮಾರ್ ನೆಟ್ಲ ಮುಡ್ನೂರು, ಅನಂತಾಡಿ ಗ್ರಾಮಗಳನ್ನು ಒಳಗೊಂಡ ಮಾಣಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ನೇರಳಕಟ್ಟೆ ಗಣೇಶ ನಗರದಿಂದ ಬೃಹತ್ ಶೋಭಾಯಾತ್ರೆ...

ಜಕ್ರಿಬೆಟ್ಟು : ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 13.5. ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಗೇಟ್ ಹಾಕಿ ನೀರು...

ಅಮ್ಮುoಜೆ : ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ..

ಬಂಟ್ವಾಳ : ಅಮ್ಮುoಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೊತ್ಸವವು ವಿಜೃಂಭಣೆಯಿಂದ ನಡೆಯಿತು. ಜ.25ರಂದು ಭಾನುವಾರ ಬಲಿ ಉತ್ಸವ ನಡೆಯಿತು. ಶ್ರೀಕ್ಷೇತ್ರ ಪೊಳಲಿಯ ಸುಬ್ರಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದೇವಳದ ಅರ್ಚಕ ನರೇಂದ್ರ ಭಟ್,...