Wednesday, July 9, 2025

ಕಲ್ಲಡ್ಕ : ಭಾರತ- ಚೀನಾ ಯುದ್ಧದಲ್ಲಿ ಹುತಾತ್ಮರಾದ ದೇಶದ ವೀರ ಸೈನಿಕರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಬಂಟ್ವಾಳ: ಶ್ರೀರಾಮ ಮಂದಿರ, ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಕಲ್ಲಡ್ಕ ವತಿಯಿಂದ ಭಾರತ ಮತ್ತು ಚೀನಾ ಮಧ್ಯೆ ನಡೆದಂತಹ ಘರ್ಷಣೆಯಲ್ಲಿ ಹುತಾತ್ಮರಾದ ನಮ್ಮ ದೇಶದ ವೀರ ಸೈನಿಕರಿಗೆ ಭಾವಪೂರ್ಣ ಶ್ರದ್ಧಾಂಜಲಿ ಆರ್ಪಿಸುವ ಕಾರ್ಯಕ್ರಮ ನಡೆಯಿತು. ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಶ್ರದ್ಧಾಂಜಲಿ ಸಮರ್ಪಿಸಿ, ಜನ ಜಾಗೃತಿಯ ಬಗ್ಗೆ ಮಾತನಾಡಿದರು.

ಸಾಮಾಜಿಕ ಅಂತರದಲ್ಲಿ ಕಾರ್ಯಕ್ರಮ ನಡೆಯಿತು. ಶ್ರೀರಾಮ ಮಂದಿರದ ಟ್ರಸ್ಟ್ ಸದಸ್ಯರಾದ ಕಮಲಾ ಪ್ರಭಾಕರ್ ಭಟ್,  ನಾಗೇಶ್, ಚೆನ್ನಪ್ಪ ಆರ್ ಕೋಟ್ಯಾನ್, ಕೆ  ಕೃಷ್ಣಪ್ಪ, ಸುಜಿತ್ ಕೊಟ್ಟಾರಿ, ಬಾಳ್ತಿಲ ಪಂಚಾಯತ್ ಮಾಜಿ ಅಧ್ಯಕ್ಷರಾದ ವಿಠಲ ನೆಲ್ಲಿ. ಹಿಂದುಜಾಗರಣ ವೇದಿಕೆಯ ರತ್ನಾಕರ ಶೆಟ್ಟಿ, ಭಜರಂಗದಳ ಸಂಚಾಲಕರಾದ ಮಿಥುನ್ ಪೂಜಾರಿ, ವಿಶ್ವಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪದ್ಮನಾಭ ಕಟ್ಟೆ ಸಂಘಟೆನೆಯ ಸದಸ್ಯರು ಉಪಸ್ಥಿತರಿದ್ದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...