Thursday, June 26, 2025

ಬಾಳ್ತಿಲ ಗ್ರಾಮಸ್ತರಿಂದ ಡಾ| ಪ್ರಭಾಕರ ಭಟ್ ‌ಕಲ್ಲಡ್ಕ ಇವರಿಗೆ ಅಭಿನಂದನಾ ಕಾರ್‍ಯಕ್ರಮ

ಕಲ್ಲಡ್ಕ: ನೇತ್ರಾವತಿ ನದಿ ಬಾಳ್ತಿಲ ಗ್ರಾಮದ ಪಕ್ಕದಲ್ಲೇ ಹರಿಯುತ್ತಿದ್ದರೂ ಬಾಳ್ತಿಲ ಗ್ರಾಮದ ಕೃಷಿಕರಿಗೆ ನೀರಿನ ಅಭಾವದಿಂದಾಗಿ ಕೃಷಿ ಕಾರ್‍ಯ ಸಮರ್ಪಕವಾಗಿ ನಡೆಸಲು ಆಗುತ್ತಿಲ್ಲ. ಇದನ್ನು ಮನಗಂಡ ಗ್ರಾಮಸ್ಥರು ಡಾ| ಪ್ರಭಾಕರ ಭಟ್ ಇವರನ್ನು ಭೇಟಿ ಮಾಡಿ ಬಾಳ್ತಿಲ ಗ್ರಾಮಕ್ಕೆ ಏತ ನೀರಾವರಿ ಯೋಜನೆಯನ್ನು ಮಾಡಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ವಿನಂತಿಸಿದರು.

ಅದರಂತೆ ಶಾಸಕ ರಾಜೇಶ್ ನಾಯ್ಕ್, ಮಾಜಿ ಶಾಸಕರುಗಳಾದ ರುಕ್ಮಯ ಪೂಜಾರಿ ಮತ್ತು ಪದ್ಮನಾಭ ಕೊಟ್ಟಾರಿ ಹಾಗೂ ಗ್ರಾಮಸ್ಥರ ಮನವಿಯೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಇದಕ್ಕೆ ಸ್ಪಂಧಿಸಿದ ಮುಖ್ಯಮಂತ್ರಿಗಳು ಅದಕ್ಕೆ ಬೇಕಾದ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿಯನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಆದೇಶಿದರು. ಇದಕ್ಕೆ ಸಂತೋಷಪಟ್ಟ ಬಾಳ್ತಿಲ ಗ್ರಾಮಸ್ಥರು ಡಾ| ಪ್ರಭಾಕರ ಭಟ್ ಇವರಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಠಲ ನಾಯ್ಕ, ಸದಸ್ಯರಾದ ಆನಂದ ಶೆಟ್ಟಿ, ಪ್ರಮುಖರಾದ ಮೋಹನ ಪಿ.ಯಸ್., ಗೋಪಾಲ ಶೆಣೈ, ಪುಲಿಂಚ ಶ್ರೀಧರ ಶೆಟ್ಟಿ, ರಾಮಣ್ಣ ಶೆಟ್ಟಿ, ವೆಂಕಟ್ರಾಯ ಪ್ರಭು, ಶಾಂತರಾಮ ಶೆಣೈ, ಸಹಕಾರಿ ಸಂಘದ ನಿರ್ದೇಶಕರಾದ ಲೋಕನಾಥ ಏಳ್ತಿಮಾರ್ ಮತ್ತಿತರರು ಉಪಸ್ಥಿತರಿದ್ದರು.

More from the blog

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...