ಕಲ್ಲಡ್ಕ: ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಹಾಗೂ ಜೆಸಿಐ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಜೆಸಿಐ ಜೋಡುಮಾರ್ಗ ನೇತ್ರಾವತಿ ಪ್ರಾಂತ್ಯ 15ಈ ಇದರ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ ಇವರು ಭಾಗವಹಿಸಿ ವಿದ್ಯಾರ್ಥಿಗಳು ಅವಕಾಶ ಮತ್ತು ಆಶಾವಾದಿಗಳಾಗಿರಬೇಕು.

ಬಂದಂತಹ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಂಡಾಗ ಮಾತ್ರ ನಾವು ಬೆಳೆಯುವುದಕ್ಕೆ ಸಾಧ್ಯವಿದೆ. ರಾಷ್ಟ್ರೀಯ ಭಾವೈಕ್ಯತೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮತ್ತು ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಜೆಸಿಐ ಪ್ರಯತ್ನಿಸುತ್ತಿದೆ ಎಂದರು. ನಂತರ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾವೈಕ್ಯತೆಯ ಪ್ರತಿಜ್ಞೆಯನ್ನು ಸ್ವೀಕರಿಸಿದರು.
ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಹರೀಶ ಎ. ಉಪಸ್ಥಿತರಿದ್ದರು.