Friday, January 30, 2026

ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಎ.12ರಂದು ದೀಪಪ್ರದಾನ

ಬಂಟ್ವಾಳ: ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ 2018-19ನೇ ಸಾಲಿನ ದೀಪಪ್ರದಾನ ಕಾರ್ಯಕ್ರಮವು ಎ.12ನೇ ಶುಕ್ರವಾರದಂದು ವೇದವ್ಯಾಸ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಎಂ. ಎಸ್., ಎನ್. ಐ.ಟಿ.ಕೆ. ಸುರತ್ಕಲ್‌ನ ಆಡಳಿತ ನಿರ್ದೇಶಕ ಡಾ| ಕೆ. ಬಲವೀರ ರೆಡ್ಡಿ, ಚೆನ್ನೈನ ವಿಕ್ರಾಂತ್ ಕೆಮಿಕಲ್ ಕಾರ್ಪೋರೇಶನ್ ಪ್ರೈ. ಲಿ. ಆಡಳಿತ ನಿರ್ದೇಶಕ ಬಿ. ಜಿ. ಕಾರಂತ್, ಕರ್ನಾಟಕ ರಾಜ್ಯ ಸಾವಿತ್ರಿ ಭಾಯಿಪುಲೆ ಶಿಕ್ಷಕಿಯರ ಸಂಘ ಧಾರಾವಾಡದ ರಾಜ್ಯಾಧ್ಯಕ್ಷ ಲತಾ ಮುಳ್ಳೂರು ಆಗಮಿಸಲಿದ್ದಾರೆ. ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ರಾಷ್ಟ್ರ ಸೇವಿಕಾ ಸಮಿತಿ ಪ್ರಾಂತ ಕಾರ್‍ಯಕಾರಿಣಿ ಸದಸ್ಯೆ ಕಮಲಾ ಪ್ರಭಾಕರ ಭಟ್, ಶ್ರೀರಾಮ ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್ ಎನ್. ಗೌರವ ಉಪಸ್ಥಿತರಿರುತ್ತಾರೆ ಎಂದು ಪದವಿ ಪ್ರಾಚಾರ್ಯ ಶ್ರೀ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...