Wednesday, July 9, 2025

ಕಲ್ಲಡ್ಕ: ನುಡಿ-ನಾದ-ನಾಟ್ಯಗಳ ಸಂಗಮ ಪುಣ್ಯಭೂಮಿ ಭಾರತ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ದಶಮಾನೋತ್ಸವದ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾಟದ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಪ್ರಾಯೋಜಕತ್ವದಲ್ಲಿ ರಾಷ್ಟ್ರ ದೇವೋಭವ ಖ್ಯಾತಿಯ ಮಂಗಳೂರು ಸನಾತನ ನಾಟ್ಯಾಲಯದ ನಿರ್ದೇಶಕ ಚಂದ್ರಶೇಖರ್ ಶೆಟ್ಟಿರವರ ಮಾರ್ಗದರ್ಶನದಲ್ಲಿ ಪ್ರಸ್ತುತಪಡಿಸಿದ ನುಡಿ -ನಾದ -ನಾಟ್ಯಗಳ ಸಂಗಮ ಪುಣ್ಯಭೂಮಿ ಭಾರತ ಎಂಬ ನಾಟ್ಯವೈಭವ ಕಾರ್ಯಕ್ರಮವು ಶ್ರೀರಾಮ ವಿದ್ಯಾಕೇಂದ್ರದ ಆವರಣದಲ್ಲಿ ಜರುಗಿತು.


ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಸ್ತುತ ಪುಣ್ಯಕೋಟಿಯ ಪರಿಸ್ಥಿತಿ, ಗಂಗಾವತಾರ, ವಿವೇಕಾನಂದ ಮತ್ತು ಅವರ ಸಾಧನೆ, ಭಾರತೀಯ ಸಂಸ್ಕೃತಿ ಸಂಸ್ಕಾರ, ವೀರ ಸಾವರ್ಕರ್, ದೇಶದ ಬೆನ್ನೆಲುಬು- ರೈತನ ಗುಣಗಾನವನ್ನು ’ನುಡಿ-ನಾದ-ನಾಟ್ಯ’ಗಳ ಮೂಲಕ ಸನಾತನ ನಾಟ್ಯಾಲಯದ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು. ಕಾರ್ಯಕ್ರಮದ ಅಂತಿಮದಲ್ಲಿ ಆದರ್ಶ ಗೋಖಲೆಯವರ ನಿರ್ದೇಶನದಲ್ಲಿ ಸಭಿಕರೆಲ್ಲರು ಒಂದು ಅಂಗುಲ ಆಹಾರವನ್ನು ಬಿಸಾಡುವುದಿಲ್ಲ ಎಂಬ ಪ್ರತಿಜ್ಞೆ ಸ್ವೀಕರಿಸಿರುವುದು ವಿಶೇಷವಾಗಿತ್ತು.
ಕಾರ್ಯಕ್ರವು ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್‌ರವರ ನಿರ್ದೇಶನ, ವಿದುಷಿ ಶ್ರೀಲತಾ ನಾಗರಾಜರವರ ನೃತ್ಯ ನಿರ್ದೇಶನ ಮತ್ತು ಪ್ರಖರ ವಾಗ್ಮಿ ಆದರ್ಶ ಗೋಖಲೆರವರ ನಿರೂಪಣೆಯಲ್ಲಿ ನಾಟ್ಯವೈಭವವು ಮೂಡಿಬಂತು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...