Thursday, February 13, 2025

ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯ: ಪೋಷಕರ ಸಭೆ 2019-2020

 ಬಂಟ್ವಾಳ: ಸಂಸ್ಕಾರಯುತ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಬೆಳೆಗಿಸುವುದು ಹಾಗೂ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಉತ್ತೇಜಿಸುವುದರ ಮೂಲಕ ಅವರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವುದು ಶ್ರೀರಾಮ ವಿದ್ಯಾಕೇಂದ್ರದ ಉದ್ದೇಶ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.
ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ 2019-20ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಅವರು ಮಾತನಾಡಿದರು.
ಶ್ರೀರಾಮ ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಹಾಗೂ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಸಂಯೋಜಕ ಶ್ರೀ. ವಿವೇಕ್ ರಂಜನ್ ಭಂಡಾರಿ ಅವರು ತಮ್ಮ ವಿದ್ಯಾಸಂಸ್ಥೆಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು. ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಉಪಸ್ಥಿತರಿದ್ದರು.
ಪದವಿಪೂರ್ವ ವಿಭಾಗದ ಪ್ರಾಂಶುಪಾಲ ವಸಂತ ಬಲ್ಲಾಳ್ ಪ್ರಸ್ತಾವಿಸಿ, ಸ್ವಾಗತಿಸಿದರು. ಗಣಕಶಾಸ್ತ್ರ ಉಪನ್ಯಾಸಕಿ ಚೈತನ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...