Thursday, February 13, 2025

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಮತ್ತು ಗ್ರಾಮ ವಿಕಾಸ ಸಮಿತಿ ಅಮ್ಟೂರು ಇದರ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆ

ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಮತ್ತು ಗ್ರಾಮ ವಿಕಾಸ ಸಮಿತಿ ಅಮ್ಟೂರು ಇದರ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆ
ಯೋಗಾಸನ ದೇಹ ಹಾಗೂ ಮನಸ್ಸನ್ನು ಒಗ್ಗೂಡಿಸುವಂತಹ ಕ್ರಿಯೆ. ಆಂತರಿಕ ಹಾಗೂ ಬಾಹ್ಯವಾಗಿ ದೇಹವನ್ನು ಸಮತೋಲನದಲ್ಲಿರಿಸಿಕೊಳ್ಳಲು ಯೋಗಾಸನವು ಸರಳ ಹಾಗೂ ಸುಲಭ ವಿಧಾನ. ದೈನಂದಿನ ಯೋಗಾಭ್ಯಾಸದಿಂದ ಉತ್ತಮ ಆರೋಗ್ಯವನ್ನು ಹೊಂದಬಹುದು ಎಂದು ಶ್ರೀರಾಮ ವಿದ್ಯಾಕೇಂದ್ರ ಹಾಗೂ ಗ್ರಾಮ ವಿಕಾಸ ಸಮಿತಿ ಅಮ್ಟೂರು ಇದರ ಆಶ್ರಯದಲ್ಲಿ, ಅಮ್ಟೂರು ಕೇಶವನಗರದ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಗೋಳ್ತಮಜಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಜಯಲಕ್ಷ್ಮೀ ಇವರು ತಿಳಿಸಿದರು.


ಕಾರ್‍ಯಕ್ರಮದಲ್ಲಿ ಶ್ರೀರಾಮ ಪ್ರೌಢಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ, ವಿಶ್ವನಾಥ ಪ್ರಭು,ಗೋಳ್ತಮಜಲು ಪಂಚಾಯಿತಿ ಸದಸ್ಯರಾದ ಜಯಂತ ಗೌಡ ಹಾಗೂ ಶಾರದಾಂಬಾ ಭಜನಾ ಮಂದಿರ, ಕೇಶವನಗರ ಅಮ್ಟೂರು ಇದರ ಅಧ್ಯಕ್ಷರಾದ ನಾರಾಯಣ ಗೌಡ ಇವರು ಉಪಸ್ಥಿತರಿದ್ದರು. ಪ್ರೌಢಶಾಲಾ ಶಿಕ್ಷಕರಾದ ಗೋಪಾಲ್ ಶ್ರೀಮಾನ್ ಇವರು ಯೋಗದ ಅಭ್ಯಾಸಕ್ಕೆ ಚಾಲನೆ ನೀಡಿದರು, ಸೇರಿದ್ದಂತಹ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ ನಡೆಯಿತು. ಶಿಕ್ಷಕರಾದ ಮನೋಜ್ ಶ್ರೀಮಾನ್ ಸ್ವಾಗತಿಸಿ ಅಮ್ಟೂರು ಗ್ರಾಮ ವಿಕಾಸ ಸಮಿತಿಯ ನಿರ್ವಾಹಕಿ ರೇಷ್ಮಾ ಇವರು ವಂದಿಸಿದರು. ಈ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿಯ ಸದಸ್ಯರಾದ ಕುಶಾಲಪ್ಪ ಅಮ್ಟೂರು ಹಾಗೂ ಶಿಕ್ಷಕಿ ಭಾಗ್ಯ ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...