ಬಂಟ್ವಾಳ: ಕಿಡಿಗೇಡಿಗಳ ತಂಡವೊಂದು ಆರು ಖಾಸಗಿ ಬಸ್ ಗಳಿಗೆ ಕಲ್ಲೆಸೆದು ಹಾನಿ ಮಾಡಿದ ಪ್ರತ್ಯೇಕ ಘಟನೆ ಬಂಟ್ವಾಳ ತಾಲೂಕಿನಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ವಿಟ್ಲ ಠಾಣಾ ವ್ಯಾಪ್ತಿಯ ಸೂರಿಕುಮೇರ್ ಸಹಿತ ಮೂರು ಕಡೆಗಳಲ್ಲಿ ಹಾಗೂ ಬಂಟ್ವಾಳ ಠಾಣಾ ವ್ಯಾಪ್ತಿಯ ಕುದ್ರೆಬೆಟ್ಟು, ಪಾಣೆಮಂಗಳುರು, ನರಹರಿ ಸಮೀಪ ಸೇರಿ ಮೂರು ಖಾಸಗಿ ಬಸ್ ಗಳಿಗೆ ಕಲ್ಲೆಸೆದು ಹಾನಿ ಮಾಡಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.