ಬಂಟ್ವಾಳ : ಕಂಚಿನಡ್ಕಪದವು ತ್ಯಾಜ್ಯ ಸಂಸ್ಕರಣಾ ಘಟಕದ ಸಮಸ್ಯೆಯ ಬಗ್ಗೆ ಪರಿಹಾರದ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಶನಿವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆದಿದ್ದಾರೆ.
ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಂಗಳೂರು ಉಳ್ಳಾಲ ಶಾಸಕ ಯು.ಟಿ.ಖಾದರ್ ಹಾಗೂ ಬಂಟ್ವಾಳ ತಹಶೀಲ್ದಾರ್, ಬಂಟ್ವಾಳ ಪುರಸಭಾ ಅಧಿಕಾರಿಗಳು ಹಾಗೂ ಸಜೀಪನಡು ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಅಧಿಕಾರಿಗಳ ಸಭೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕೊನೆಗೂ ಗ್ರಾಮಸ್ಥರ ಜಿಲ್ಲಾಧಿಕಾರಿಯವರೊಂದಿಗೆ ಸಭೆ ಕರೆಯಬೇಕು ಎಂಬ ಬೇಡಿಕೆ ಈಡೇರಿಕೆಗೆ ಅವಕಾಶ ನೀಡಿದೆ.


ಪ್ರತಿಭಟನೆ ಮೂರನೇ ದಿನಕ್ಕೆ:
ಮೂರನೇ ದಿನವೂ ಪ್ರತಿಭಟನೆ ನಡೆಸಿ ಕಂಚಿನಡ್ಕ ಪದವಿನಲ್ಲಿ ಬಂಟ್ವಾಳ ಪುರಸಭೆಯವರ ಕಸ ವಿಲೇವಾರಿಗೆ ವಿರೋಧ ವ್ಯಕ್ತಪಡಿಸಿದ ಗ್ರಾಮಸ್ಥರು. ಗ್ರಾಮದ ಜನರ ಬೇಡಿಕೆಯನ್ನು ಈಡೇರಿಸದೆ ಕಸ ವಿಲೇವಾರಿ ಮಾಡಲು ಹೊರಟಿರುವ ಬಂಟ್ವಾಳ ಪುರಸಭೆಯ ವಿರುಧ್ಧ ಸಜೀಪನಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಪರಿಸರ ಇಲಾಖೆ ನೀಡಿದ ನಿಬಂಧನೆಗಳನ್ನು ಅನುಸರಿಸಿ ಬಳಿಕ ಕಸ ವಿಲೇವಾರಿ ಮಾಡಿ ಎಂಬುದು ಗ್ರಾಮಸ್ಥರ ಬೇಡಿಕೆಯಾಗಿದೆ.

