ವಿಟ್ಲ: ಕನ್ಯಾನ ಶ್ರೀ ಸರಸ್ವತಿ ವಿದ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ ೧೨೮ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಖ್ಯಾತ ಯಕ್ಷಗಾನ ಕಲಾವಿದ ಅಶೋಕ್ ಭಟ್ ಉಜಿರೆ ಈ ಕಾರ್‍ಯಕ್ರಮವನ್ನು ದೀಪ ಬೆಳಗಿಸಿ, ಅಂಬೇಡ್ಕರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿದರು. ಅಂಬೇಡ್ಕರ್ ಸಂವಿಧಾನ ರಚನಾ ಕಾರ್‍ಯವಲ್ಲದೇ ಪುಸ್ತಕ ಪ್ರೇಮಿಯಾಗಿದ್ದು, ಅನೇಕ ಪುಸ್ತಕಗಳನ್ನು ರಚಿಸಿ ಸಮಾಜಕ್ಕೆ ಮಾದರಿಯಾಗಿದ್ದು, ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಮಕ್ಕಳ ಲೋಕ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪಕ ಭಾಸ್ಕರ ಅಡ್ವಾಳ ವಹಿಸಿದ್ದರು. ಬರಹಗಾರ್ತಿ ಶಶಿಕಲಾ ವರ್ಕಾಡಿ, ಶಾಲಾ ಸಂಚಾಲಕರಾದ ಈಶ್ವರ ಪ್ರಸಾದ್, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಮಧುರಾ ಈಶ್ವರ ಪ್ರಸಾದ್‌ರವರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಹ ಶಿಕ್ಷಕಿ ಶ್ರೀವಲ್ಲಿ ಸ್ವಾಗತಿಸಿದರು. ಸಾರಿಕಾ ವಂದಿಸಿದರು. ರೇಣುಕಾ ಕಾರ್‍ಯಕ್ರಮ ನಿರೂಪಿಸಿದರು.

