Sunday, January 25, 2026

ಕನ್ಯಾನ: ಭಾರತ್ ಸೇವಾಶ್ರಮದಲ್ಲಿ ಸ್ನೇಹ ಸಮ್ಮಿಲನ

ವಿಟ್ಲ: ದ.ಕ ಗ್ಯಾರೇಜ್ ಮಾಲಕರ ಸಂಘ ಮಂಗಳೂರು (ದ ಕ ಮತ್ತು ಉಡುಪಿ ಜಿಲ್ಲೆ) ವಿಟ್ಲ ವಲಯ ಇದರ ವತಿಯಿಂದ ಕನ್ಯಾನ ಭಾರತ್ ಸೇವಾಶ್ರಮ ನಿವಾಸಿಗಳೊಂದಿಗೆ ಸ್ನೇಹ ಸಮ್ಮಿಲನ ಕಾರ್‍ಯಕ್ರಮ ನಡೆಯಿತು.
ಮಂಗಳೂರು ದ ಕ ಮತ್ತು ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಗುಣಪಾಲ್ ಎಂ. ದೀಪ ಬೆಳಗಿಸಿ ಚಾಲನೆ ನೀಡಿದರು.
ವಿಟ್ಲ ವಲಯದ ಅಧ್ಯಕ್ಷ ಲಕ್ಷ್ಮಣ ಪೂಜಾರಿ ಆರ್.ಎಸ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾರತ್ ಸೇವಾಶ್ರಮದ ಕಾರ್‍ಯದರ್ಶಿ ಈಶ್ವರ ಭಟ್, ತುಂಬೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಿ.ಬಿ ಅಬ್ದುಲ್ ರಹಿಮಾನ್, ಶಂಭೂರು ಸರಕಾರಿ ಪ್ರೌಢಶಾಲೆಯ ಶಿಕ್ಷಕ ಸದಾಶಿವ ನಾಯಕ್, ಗ್ಯಾರೇಜ್ ಮಾಲಕರ ಸಂಘ ದ.ಕ ಮತ್ತು ಉಡುಪಿ ಜಿಲ್ಲೆಯ ಉಪಾಧ್ಯಕ್ಷ ಉದಯಕಿರಣ್ ಮತ್ತು ಬೀಡಿ ಕಾಂಟ್ರಾಕ್ಟರ್ ನೋಣಯ್ಯ ಪೂಜಾರಿ ಇವರು ಭಾಗವಹಿಸಿದ್ದರು. ವಿಟ್ಲ ವಲಯದ ಗೌರವಾಧ್ಯಕ್ಷ ಹರೀಶ್ ಆಚಾರ್‍ಯ ವಿ. ವೇದಿಕೆಯಲ್ಲಿದ್ದರು.
ಆಶ್ರಮದ ಪ್ರಮೀಳ ಮತ್ತು ಬಳಗದವರು ಆಶಯಗೀತೆ ಹಾಡಿದರು. ವಿಟ್ಲ ವಲಯದ ಗೌರವ ಸಲಹೆಗಾರ ಸುಂದರ ಆಚಾರ್ಯ ನೆಗಳಗುಳಿ ಸ್ವಾಗತಿಸಿ ಪ್ರಸ್ತಾವಿಸಿದರು. ಕಾರ್‍ಯದರ್ಶಿ ಪ್ರಕಾಶ್ ಅಣ್ಣಡ್ಕ ವಂದಿಸಿದರು. ಪರಮೇಶ್ವರ ಆಚಾರ್‍ಯ ಮಂಕುಡೆ ನೆಡ್ಯಾಳ ಕಾರ್‍ಯಕ್ರಮ ನಿರೂಪಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...