Monday, January 26, 2026

ಕಾರು ಹೊಂಡಕ್ಕೆ ಬಿದ್ದು ಒರ್ವ ಮ್ರತಪಟ್ಟು ಐವರು ಗಂಭೀರ ಗಾಯ

ಬಂಟ್ವಾಳ; ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡ ಕ್ಕೆ ಬಿದ್ದು ಒರ್ವ ಮ್ರತಪಟ್ಟು ಒಂದೇ ಮನೆಯ ಐವರು ಗಂಬೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನ ಮುಖ್ಯ ವ್ರತ್ತದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಂಗಳೂರು ಬಜಾಲ್ ನಿವಾಸಿ ಕೆ.ಎಮ್. ಶರೀಫ್ ಮ್ರತಪಟ್ಟಿದ್ದಾರೆ. ಶರೀಫ್ ಅವರ ಪತ್ನಿ ಜಮೀಲಾ, ಮಕ್ಕಳಾದ ಸಫ್ ನಾಜ್, ಸಫಾ, ಸಫ್ ವಾನ್, ಸಫ್ರೀನಾ ಅವರು ಗಂಭೀರ ಸ್ವರೂಪದ ಗಾಯಗಳಾಗಿ ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದಾರೆ.
ಒಂದೇ ಮನೆಯ ಸದಸ್ಯರು ಪುತ್ತೂರು ಸಂಬಂಧಿಕರ ಗ್ರಹಪ್ರವೇಶ ಕಾರ್ಯಕ್ರಮ ಕ್ಕೆ ತೆರಳಿ , ಕಾರ್ಯಕ್ರಮ ಮುಗಿಸಿ ವಾಪಾಸು ಮಂಗಳೂರು ಕಡೆ ಗೆ ಹೋಗುವ ವೇಳೆ ಬಿಸಿರೋಡಿನ ಲ್ಲಿ ನಡೆದಿದೆ.ಮ್ರತ ಶರೀಫ್ ಅವರ ಹಿರಿ ಮಗ ಸಫ್ವಾನ್ ಅವರು ಚಾಲನೆ ಮಾಡುತ್ತಿದ್ದರು, ಪುತ್ತೂರಿನಿಂದ ಕಾರ್ಯ ಮುಗಿಸಿ ಮನೆಗೆ ತೆರಳುವ ವೇಳೆ ಅತೀ ವೇಗದ ಚಾಲನೆಯಾ ಅಥವಾ ಒವರ್ ಟೇಕ್ ಮಾಡಿದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಬಿಸಿರೋಡಿನ ಲ್ಲಿ ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ ಯಾ ಎನ್ನುವುದು ತನಿಖೆಯ ಬಳಿಕ ಗೊತ್ತಾಗಬೇಕಾಗಿದೆ.‌
ಘಟನಾ ಸ್ಥಳ ಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಮಂಜುನಾಥ, ಎ.ಎಸ್.ಐ.ಕುಟ್ಟಿ, ಸಿಬ್ಬಂದಿ ಗಳಾದ ಮೋನಪ್ಪ, ಕ್ರಷ್ಣ ಬೇಟಿ ನೀಡಿ ಮುಂದಿನ ‌ಕ್ರಮಕೈಗೊಂಡಿದ್ದಾರೆ.

More from the blog

ಮಾಣಿಯಲ್ಲಿ ಹಿಂದೂ ಸಂಗಮ…

ಬಂಟ್ವಾಳ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಪ್ರಯುಕ್ತ ಮಾಣಿ ಪೆರಾಜೆ ಬರಿಮಾರ್ ನೆಟ್ಲ ಮುಡ್ನೂರು, ಅನಂತಾಡಿ ಗ್ರಾಮಗಳನ್ನು ಒಳಗೊಂಡ ಮಾಣಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ನೇರಳಕಟ್ಟೆ ಗಣೇಶ ನಗರದಿಂದ ಬೃಹತ್ ಶೋಭಾಯಾತ್ರೆ...

ಜಕ್ರಿಬೆಟ್ಟು : ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 13.5. ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಗೇಟ್ ಹಾಕಿ ನೀರು...

ಅಮ್ಮುoಜೆ : ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ..

ಬಂಟ್ವಾಳ : ಅಮ್ಮುoಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೊತ್ಸವವು ವಿಜೃಂಭಣೆಯಿಂದ ನಡೆಯಿತು. ಜ.25ರಂದು ಭಾನುವಾರ ಬಲಿ ಉತ್ಸವ ನಡೆಯಿತು. ಶ್ರೀಕ್ಷೇತ್ರ ಪೊಳಲಿಯ ಸುಬ್ರಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದೇವಳದ ಅರ್ಚಕ ನರೇಂದ್ರ ಭಟ್,...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...