Saturday, June 28, 2025

ಅಕ್ರಮ ಕಸಾಯಿಕಾನೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್

ಬಂಟ್ವಾಳ: ಕಾರಾಜೆ ಎಂಬಲ್ಲಿನ ಅಕ್ರಮ ಕಸಾಯಿಕಾನೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ಅವರು ಮಾಂಸ ಸಹಿತ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿಯ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಸುಮಾರು 40 ಕೆ.ಜಿ.ಮಾಂಸ ಹಾಗೂ ನಾಲ್ಕು ಬೈಕ್ ಒಂದು ಕಾರು ಹಾಗೂ ರಿಕ್ಷಾ ವನ್ನು ಪೋಲಿಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ಮಾರ್ನಬೈಲು ಸಮೀಪದ ಕಾರಾಜೆ ಎಂಬಲ್ಲಿನ ಮನೆಯೊಂದರಲ್ಲಿ ಅನೇಕ ವರ್ಷಗಳಿಂದ ಅಕ್ರಮವಾಗಿ ದನಗಳನ್ನು ತಂದು ವದೆ ಮಾಡಲಾಗುತ್ತಿದೆ ಎಂಬ ಮಾಹಿತಿ ಬಂಟ್ವಾಳ ಪೋಲೀಸರಿಗೆ ಸಿಕ್ಕಿತ್ತು. ಇಂದು ಖಚಿತವಾದ ಮಾಹಿತಿ ಹಿನ್ನೆಲೆಯಲ್ಲಿ ಬಂಟ್ವಾಳ ಪೋಲೀಸರು ದಾಳಿ ನಡೆಸಿದಾಗ ಮನೆಯಲ್ಲಿನ ಒಂದು ಶೆಡ್ ನಲ್ಲಿ ಅಕ್ರಮವಾಗಿ ತಂದ ಗೋವುಗಳನ್ನು ಯಾವುದೇ ಅನುಮತಿ ರಹಿತವಾಗಿ ಕಡಿದು ಮಾಂಸ ಮಾಡಲಾಗುತ್ತಿತ್ತು. ಇವರ ದಾಳಿಯ ವೇಳೆ ಮಾಂಸ ಕಡಿಯುತ್ತಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಇವರು ಮಾಂಸ ಮಾಡಿದ ಬಳಿಕ ಮನೆಮನೆಗೆ ದ್ವಿಚಕ್ರ ಹಾಗೂ ರಿಕ್ಷಾದ ಮೂಲಕ ಮನೆಮನೆಗೆ ಮಾರಾಟ ಮಾಡುತ್ತಿದ್ದರು ಎಂಬ ಆರೋಪಗಳು ಕೇಳಿ ಬಂದಿತ್ತು.

ಬಂಟ್ವಾಳ ಡಿ.ವೈ.ಎಸ್.ಪಿ.ವೆಲಂಟೈನ್ ಡಿ.ಸೋಜ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ಸಲಹೆಯಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ.ಅವಿನಾಶ್ ,ಅಪರಾಧ ವಿಭಾಗದ ಎಸ್.ಐ.ಸಂತೋಷ್ ಬಿ.ಪಿ ನೇತ್ರತ್ವದಲ್ಲಿ ಸಿಬ್ಬಂದಿ ಗಳು ದಾಳಿ ನಡೆಸಿದ್ದಾರೆ.

ಕೊರೊನಾ ಲಾಕ್ ಡೌನ್ ವೇಳೆ ಅಕ್ರಮ ಕಸಾಯಿಕಾನೆ ನಡೆಸುವ ವರನ್ನು ಶೀಘ್ರವಾಗಿ ಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮಕೈಗೊಳ್ಳಲು ವಿಶ್ವ ಹಿಂದೂ ಪರಿಷತ್ ವಿಟ್ಲ ಪ್ರಖಂಡ ಒತ್ತಾಯ ಮಾಡಿದೆ.

More from the blog

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...