Friday, June 27, 2025

ಮಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ: ಚಿನ್ಮಯಿ ಪ್ರಥಮ

ವಿಟ್ಲ: ವೆಸ್ಟರ್ನ್ ಇನ್‌ಸ್ಟಿಟ್ಯೂಟ್ ಮತ್ತು ಮಾರ್ಷಲ್ ಆರ್ಟ್ಸ್ ಇವರ ವತಿಯಿಂದ ಮಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ ಬಸವನಗುಡಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಚಿನ್ಮಯಿ ವಿ.ಜೆ ಇವರು ವೈಯಕ್ತಿಕ ಕುಮಿಟೆಯಲ್ಲಿ ಮತ್ತು ಗ್ರೂಪ್ ಕಟಾ ವಿಭಾಗದಲ್ಲಿ ಪ್ರಥಮ ಹಾಗೂ ವೈಯಕ್ತಿಕ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಇವರು ಜಗದೀಶ ಪಾಣೆಮಜಲು ಮತ್ತು ಸಂಗೀತ ದಂಪತಿ ಪುತ್ರ. ಕರಾಟೆ ಶಿಕ್ಷಕ ಮಾಧವ ಅಳಿಕೆ ಇವರ ಶಿಷ್ಯ.

ರಾಷ್ಟ್ರ ಮಟ್ಟದ ಕರಾಟೆ: ಪ್ರಶಸ್ತಿ
ವಿಟ್ಲ: ವೆಸ್ಟರ್ನ್ ಇನ್‌ಸ್ಟಿಟ್ಯೂಟ್ ಮತ್ತು ಮಾರ್ಷಲ್ ಆರ್ಟ್ಸ್ ಇವರ ವತಿಯಿಂದ ಮಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರು ಸುದಾನ ಶಾಲೆಯ 3ನೇ ತರಗತಿಯ ವಿದ್ಯಾರ್ಥಿ ಆದಿತ್ಯ ಹೆಚ್. ವೈಯಕ್ತಿಕ ಕುಮಿಟೆಯಲ್ಲಿ ಮತ್ತು ಗ್ರೂಪ್ ಕಟಾದಲ್ಲಿ ದ್ವಿತೀಯ ಹಾಗೂ ವೈಯಕ್ತಿಕ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಇವರು ಹರೀಶ ವಿ. ಮತ್ತು ರಶ್ಮಿ ದಂಪತಿ ಪುತ್ರ. ಕರಾಟಿ ಶಿಕ್ಷಕ ಮಾಧವ ಅಳಿಕೆ ಇವರ ಶಿಷ್ಯ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...