Thursday, February 5, 2026

ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನ ಆಟಿ ಅಮಾವಾಸ್ಯೆ ತೀರ್ಥಸ್ನಾನ ನಿಷೇಧ

ಬಂಟ್ವಾಳ: ಕೋವಿಡ್-29 ಪ್ರಕರಣಗಳ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸರಕಾರದ ನಿರ್ದೇಶನದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದು, ಬಂಟ್ವಾಳ ತಾಲೂಕು ಕಾರಿಂಜದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ  ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥಸ್ನಾನವನ್ನು ನಿಷೇಧಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಪ್ರಕಟನೆಯಲ್ಲಿ ತಿಳಿಸಿದೆ.
ಆ.8 ರಂದು ಆಟಿ ಅಮಾವಾಸ್ಯೆಯಂದು ಭಕ್ತಾಽಗಳು ಇಲ್ಲಿನ ಗದಾ ತೀರ್ಥದಲ್ಲಿ ತೀರ್ಥಸ್ನಾನ ನಡೆಸಿ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯವಿದೆ. ಆದರೆ ಕೋವಿಡ್ ನಿಯಂತ್ರಣಕ್ಕಾಗಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿರುವುದರಿಂದ ತೀರ್ಥಸ್ನಾನಕ್ಕೆ ಅವಕಾಶ ನೀಡಲಾಗುವುದಿಲ್ಲ. ನಿಯಮ ಪಾಲನೆ ಅನುಷ್ಠಾನಕ್ಕಾಗಿ ಆ ದಿನದಂದು ಗದಾ ತೀರ್ಥದ ಸುತ್ತ ಪೊಲೀಸ್ ಬಂದೋಬಸ್ತ್ ಎರ್ಪಡಿಸಲಾಗುವುದು, ಭಕ್ತಾಧಿಗಳು ಸಹಕರಿಸಬೇಕಾಗಿ ಆಡಳಿತಾಧಿಕಾರಿ ನೋಣಯ್ಯ ನಾಯ್ಕ್ ತಿಳಿಸಿದ್ದಾರೆ.

More from the blog

ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಗೆ ಹನೀಫ್ ಬಗ್ಗುಮೂಲೆ ಹಾಗೂ ಸಿದ್ದೀಕ್ ಸೂರ್ಯ ನೇಮಕ

ಬಂಟ್ವಾಳ : ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಯ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಳಕೆಮಜಲು ಸಮೀಪದ ಬಗ್ಗುಮೂಲೆ ನಿವಾಸಿ ಹನೀಫ್ ಬಗ್ಗುಮೂಲೆ ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಯುವ ಸಂಘಟಕ, ಯುವ ಉದ್ಯಮಿ,...

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ...

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...