Sunday, July 13, 2025

ಸಂಪ್ರದಾಯದಂತೆ ಹಲವು ಕಟ್ಟೆಗಳಿಗೆ ಕಾರಿಂಜದ ದೇವರ ಆಗಮನ ತೆನೆ ಹಬ್ಬ ಆಚರಣೆ: ಹೊಸ ಅಕ್ಕಿ ಊಟ

ಬಂಟ್ವಾಳ: ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ ಆಚರಣೆ ಸಂಪನ್ನಗೊಂಡಿತು. ಪ್ರತೀ ವರ್ಷ ಕನ್ಯಾ ಸಂಕ್ರಮಣದ ಮರು ದಿವಸ ನಡೆಯುವ ತೆನೆ ಹಬ್ಬ ಆಚರಣೆಗಾಗಿ ಕಾರಿಂಜದಿಂದ ಸುಮಾರು ೯ ಕಿ.ಮೀ. ದೂರವಿರುವ ಸರಪಾಡಿ ಹಲ್ಲಂಗಾರು ಗದ್ದೆಯೊಂದರಿಂದ ತೆನೆಗಳನ್ನು ತರಲಾಗುತ್ತಿದ್ದು, ಈ ಬಾರಿಯೂ ಸಂಪ್ರದಾಯದಂತೆ ನೆರವೇರಿಸಲಾಯಿತು. ಸೂರ್ಯೋದಯದ ಮುಂಚೆ ಶ್ರೀ ಕ್ಷೇತ್ರ ಕಾರಿಂಜದಿಂದ ವಾದ್ಯ ವೃಂದ ಸಹಿತ ಅರ್ಚಕರು, ತಂತ್ರಿಗಳು, ಗ್ರಾಮಣಿಗಳು, ಮುಖ್ಯಸ್ಥರು ಕಾಲ್ನಡಿಗೆಯಲ್ಲಿ ಮೆರವಣಿಗೆ ಹೊರಟು ದಾರಿಯಲ್ಲಿ ಏಳು ಕಟ್ಟೆಗಳಾದ ಶೇಡಿಮೆ ಕಟ್ಟೆ, ದಂಡ್ಯೊಟ್ಟು ಕಟ್ಟೆ, ದೇವಶ್ಯ ಕಟ್ಟೆ, ಸೂಳ್ದು ಕಟ್ಟೆ, ಭಂಡಾರಿಕಟ್ಟೆ, ಸಮಗಾರನ ಕಟ್ಟೆ ಮತ್ತು ಹಲ್ಲಂಗಾರ್ ಕಟ್ಟೆಯಲ್ಲಿ ದೇವರಿಗೆ ಪೂಜೆ ನಡೆಸಿ ಪ್ರಸಾದ ವಿತರಿಸಲಾಯಿತು. ಕೊನೆಯ ಹಲ್ಲಂಗಾರು ಕಟ್ಟೆಯನ್ನು ಈಶ್ವರ ಸನ್ನಿಧಿ ಎಂದು ಪರಿಗಣಿಸಿ ದರ್ಶನ ಬಲಿ ಸಹಿತ ಪೂಜೆ ನಡೆಯಿತು. ಬಳಿಕ ಸಮೀಪದಲ್ಲಿ ಬಂಗಾರದ ತೆನೆ ಬೆಳೆಯಿತೆನ್ನಲಾದ ಕಂಬಳದ ಗದ್ದೆಯಿಂದ ತೆನೆ ತಂದು ಹೊಸ ವಸ್ತ್ರದಲ್ಲಿ ಹೊದಿಸಿ ಸಮರ್ಪಿಸಲಾಯಿತು. ಅನಂತರ ಶ್ರೀ ಕ್ಷೇತ್ರ ಕಾರಿಂಜಕ್ಕೆ ತಂದು ಲಕ್ಷ್ಮೀ ಪೂಜೆ ನಡೆಸಿ ದೇವಸ್ಥಾನಕ್ಕೆ ತೆನೆ ಕಟ್ಟಲಾಯಿತು. ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಪವಿತ್ರ ತೆನೆ ತಂದು ಮನೆ ತುಂಬಿಸುವ ಸಂಪ್ರದಾಯ ನಡೆಸಲಾಯಿತು.

 

ಸರಪಾಡಿ, ಮಣಿನಾಲ್ಕೂರು ಗ್ರಾಮಸ್ಥರು ಈ ತೆನೆ ಹಬ್ಬದಲ್ಲಿ ಭಾಗವಹಿಸಿ ತಮ್ಮ ವ್ಯಾಪ್ತಿಯ ಕಟ್ಟೆಗಳಿಂದ ತೆನೆ ಸಂಗ್ರಹಿಸಿ ಮನೆ ತುಂಬಿಸಿ ಹೊಸ ಅಕ್ಕಿ ಊಟ ಮಾಡಿದರು. ಶ್ರೀ ಶರಭೇಶ್ವರ ದೇವಸ್ಥಾನದಲ್ಲಿಯೂ ತೆನೆ ವಿತರಿಸಲಾಯಿತು.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...