Wednesday, February 12, 2025

ಮಾ.3 ರಂದು ಶ್ರೀ ಕಾರಿಂಜ ಕ್ಷೇತ್ರಕ್ಕೆ ಮಹಾರಥ ಸಮರ್ಪಣೆಯ ಶೋಭಾಯಾತ್ರೆ

ಬಂಟ್ವಾಳ: ಭೂ ಕೈಲಾಸ ಪ್ರತೀತಿಯ ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ 50 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾದ ನೂತನ ಮಹಾರಥದ ಸಮರ್ಪಣೆ ಕಾರ್ಯಕ್ರಮ ಮಾ.3ರಂದು ನಡೆಯಲಿದೆ.

ದೇವಸ್ಥಾನದ ಜಾತ್ರೆಯ ವೇಳೆ ಶ್ರೀ ಪಾರ್ವತಿ ಪರಮೇಶ್ವರ ದೇವರು ರಥಾರೂಢರಾಗುವ ರಥವು ಶಿಥಿಲಗೊಂಡಿದ್ದು, ಪ್ರಶ್ನಾಚಿಂತನೆಯಲ್ಲಿ ತಿಳಿದು ಬಂದ ಪ್ರಕಾರ ಗ್ರಾಮಸ್ಥರು ಈ ವರ್ಷದ ಜಾತ್ರೆ ವೇಳೆ ನೂತನ ನಿರ್ಮಾಣ ಮಾಡಿ ಸಮರ್ಪಿಸುವ ಸಂಕಲ್ಪ ತೊಟ್ಟಿದ್ದು, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ರಥ ನಿರ್ಮಾಣ ಕಾರ್ಯ ಆರಂಭಿಸಲಾಗಿತ್ತು. ಕೋಟೇಶ್ವರದ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರ ಕುಂಭಾಶಿ ಇದರ ಶಿಲ್ಪಿ ರಾಜಗೋಪಾಲ ಆಚಾರ್ಯ ಅವರ ನೇತೃತ್ವದಲ್ಲಿ ರಥ ನಿರ್ಮಾಣ ಕಾರ್ಯ ನಡೆದಿದೆ.

ನೂತನ ಮಹಾರಥವನ್ನು ದೇಗುಲಕ್ಕೆ ಸಮರ್ಪಿಸುವ ಮುನ್ನ ಶೋಭಾಯಾತ್ರೆ ನಡೆಯಲಿದ್ದು, ಮಧ್ಯಾಹ್ನ ೩ ಗಂಟೆಗೆ ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವಸ್ಥಾನದ ಬಳಿ ಚಾಲನೆ ನೀಡಲಾಗುವುದು. ಬಳಿಕ ಬಂಟ್ವಾಳ, ವಗ್ಗ, ಕಾವಳಕಟ್ಟೆ, ಎನ್‌ಸಿ ರೋಡ್, ಮಾರ್ಗವಾಗಿ ಕಾರಿಂಜಕ್ಕೆ ಮೆರವಣಿಗೆ ಸಾಗಿ ಬರಲಿದೆ. ಬಳಿಕ ಶ್ರೀ ಪಾರ್ವತಿ ಸನ್ನಿಧಿಯಲ್ಲಿ ಸಮರ್ಪಣೆ ಕಾರ್ಯಕ್ರಮ, ಧಾರ್ಮಿಕ ಸಭೆ ನಡೆಯಲಿದೆ.

ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ, ಮುಂಬ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ , ಪುಣೆ ಉದ್ಯಮಿ ಕೆ.ಕೆ.ಶೆಟ್ಟಿ, ಮತ್ತಿತರರು ಭಾಗವಹಿಸಲಿರುವರು. ಬಳಿಕ ಪರಿಮಳ ಕಾಲನಿ ತುಳು ನಾಟಕ ಪ್ರದರ್ಶವಿದೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...