Tuesday, February 11, 2025

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ.

ಬಂಟ್ವಾಳ ತಾಲೂಕು ಕರಿಯಂಗಳ ಸಮೀಪದ ಪು0ಚಮೆ ಯಲ್ಲಿ ಸರ್ವೇ ನಂಬರ್ 152/2A2 -0.20 ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ (ಇಸ್ಲಾಮಿಕ್ ಎಜುಕೇಶನ್ ಸೆಂಟರ್) ಮಾಡಲು ಮುಂದಾಗಿದ್ದಾರೆ.
ಕರಿಯಂಗಳ ಗ್ರಾಮ ಪಂಚಾಯಿತಿ ಅನುಮತಿ ಇಲ್ಲದೆ ಕಟ್ಟಡ ನಿರ್ಮಿಸಿ ಯಾವುದೇ ಅನುಮತಿಯೇ ಇಲ್ಲದೆ ಮಸೀದಿ ನಿರ್ಮಿಸುತ್ತಿದ್ದಾರೆ ಎಂಬ ಆರೋಪವನ್ನು ಗ್ರಾಮಸ್ಥರು ಮಾಡಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿದ ಗ್ರಾಮಸ್ಥರು ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ದೂರು ನೀಡಿದ್ದರು.ಜೊತೆಗೆ ಜಿಲ್ಲಾಧಿಕಾರಿ ಹಾಗೂ ತಹಶಿಲ್ದಾರ್ ಅವರಿಗೂ ಮನವಿ ಮಾಡಲಾಗಿದೆ.
ನೀಡಿದ ದೂರಿಗೆ ಕರಿಯಂಗಳ ಗ್ರಾಮ ಪಂಚಾಯಿತಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಸ್ಥಳೀಯರಿಂದ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಅದರ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ ನೀಡಲಾಯಿತು.
ಈ ಸಮಯದಲ್ಲಿ ಗ್ರಾಮದಪ್ರಮುಖರಾದ ವೆಂಕಟೇಶ್ ನಾವಡ ಪೊಳಲಿ , ಯಶವಂತ್ ಪೊಳಲಿ , ರೋಶನ್ ಅಮೀನ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

More from the blog

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...

ಸಿಲಿಂಡರ್ ಸ್ಫೋಟ : ಓರ್ವನಿಗೆ ಗಾಯ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ನಡೆದಿದೆ. ಸುಭಾಷ್ ನಗರ ನಿವಾಸಿ...