Monday, January 26, 2026

ತಮ್ಮನ ಮನೆಗೆ ಬೆಂಕಿ ಹಚ್ಚಿ ಕಾರಿನೊಳಗೆ ಪೆಟ್ರೋಲ್ ಸುರಿದು ಸಜೀವದಹನನಾದ ಅಣ್ಣ

ಬೆಳ್ಮಣ್‌: ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ತಡರಾತ್ರಿ ನಡೆದಿದೆ.

ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಕುಲಾಲ್ ಬರ್ಬರ ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.

ಕೃಷ್ಣ ಕುಲಾಲ್ ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು, ಈತ ತನ್ನ ತಮ್ಮ ಶೇಖರ ಕುಲಾಲ್ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತಾನು ತನ್ನ ಓಮಿನಿಯಲ್ಲಿ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸುಟ್ಟು ಭಸ್ಮವಾಗಿದ್ದಾನೆ. ಶೇಖರನ ಮನೆಯಲ್ಲಿ ಕೃಷ್ಣ ಹಾಗೂ ಶೇಖರನ ಸಹೋದರಿ ಮಗಳ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದರು ಎನ್ನಲಾಗಿದೆ. ಜಮೀನು ವಿವಾದ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಕೃತ್ಯಕ್ಕೆ ಮುನ್ನ ಕೃಷ್ಣ ಡೆತ್ ನೋಟ್ ಬರೆದು ಕಾಂಪೌಂಡ್ ಗೋಡೆಗೆ ಅಂಟಿಸಿದ್ದು, ಹಲವರ ಹೆಸರು ಉಲ್ಲೇಖಿಸಲಾಗಿದೆ. ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...