Thursday, June 26, 2025

ಪಂಚಾಯತ್ ಸದಸ್ಯರು ಸಮಾಜದ ಜೊತೆ ಬೆರೆತಾಗ ಗ್ರಾಮಸ್ವರಾಜ್ಯದ ಪರಿಕಲ್ಪನೆ ಸಾಕಾರ: ಟಿ.ಎಂ. ಅಬೂಬಕ್ಕರ್

ಬಂಟ್ವಾಳ: ಪಂಚಾಯತ್ ಸದಸ್ಯರು ಸಮಾಜದ ಜೊತೆಗೆ ಬೆರೆತಾಗ ಮಾತ್ರ ಗ್ರಾಮಸ್ವರಾಜ್ಯದ ಪರಿಕಲ್ಪನೆ ಸಾಕಾರಗೊಳ್ಳಲು ಸಾಧ್ಯ ಎಂದು ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ರಾಜ್ಯ ತರಬೇತಿ ಸಂಯೋಜಕ ಟಿ.ಎಂ. ಅಬೂಬಕ್ಕರ್ ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಮೈಸೂರು, ದ.ಕ. ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್ ವತಿಯಿಂದ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್. ವೈ. ಮತ್ತು ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯಾಭಿವೃದ್ದಿ ತರಬೇತಿ ಕಾರ್ಯಗಾರಕ್ಕೆ ಬುಧವಾರ ಭೇಟಿ ನೀಡಿದ ಅವರು, ಗ್ರಾ.ಪಂ. ಸದಸ್ಯರೊಂದಿಗೆ ಮಾತನಾಡಿದರು.

ಪಂಚಾಯತ್ ರಾಜ್ ಪರಿಕಲ್ಪನೆ, ಮೂಲ ಆಶಯ, ತರಬೇತಿಯ ರೂಪುರೇಷೆಯ ಕುರಿತು ವಿವರಿಸಿದ ಅವರು, ಎಲ್ಲಾ ಸದಸ್ಯರು ಬದಲಾಗಿರುವ ಪಂಚಾಯತ್ ರಾಜ್ ಕಾಯ್ದೆಯ ಬಗ್ಗೆ ಅರಿವನ್ನು ಪಡೆದುಕೊ ಳ್ಳಬೇಕು ಎಂದರು. ಸದಸ್ಯರಾಗಿ ಆಯ್ಕೆಯಾಗಿರುವುದು ನಿಮಗೆ ದೊರಕಿರುವ ದೊಡ್ಡ ಅವಕಾಶವಾಗಿದ್ದು, ಲೋಕನೌಕರ ಎನ್ನುವ ಮನೋಭಾವದೊಂದಿಗೆ ಗ್ರಾಮದ ಅಭಿವೃದ್ಧಿಯ ಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

ತಾಲೂಕು ಪಂಚಾಯತ್ ಸಹಾಯಕ ಲೆಕ್ಕಾಧಿಕಾರಿ ಡಿ. ಪ್ರಶಾಂತ್ ಬಳಂಜ, ತರಬೇತುದಾರರಾದ ಮಂಜುವಿಟ್ಲ, ಉಮಾನಾಥ ಶೆಟ್ಟಿ, ಮೌನೇಶ್ ವಿಶ್ವಕರ್ಮ, ಜಯಲಕ್ಷ್ಮಿ, ಫಾರೂಕ್ ಗೂಡಿನಬಳಿ ಈ ಸಂದರ್ಭದಲ್ಲಿ ಹಾಜರಿದ್ದರು.

More from the blog

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...