Thursday, January 29, 2026

*ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯಲ್ಲಿ‌ ಜೀವನ ಕೌಶಲ‌ ಕಾರ್ಯಗಾರ*

ಪುಂಜಾಲಕಟ್ಟೆ:  ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ರಾಷ್ಟ್ರೀಯ ಸೇವಾ ಯೋಜನೆಯ ಮಂಗಳೂರು ವಿಶ್ವವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2, ಇಲ್ಲಿ ಪ್ರಥಮ ವರ್ಷದ ಬಿಬಿಎಂ ಹಾಗೂ ಬಿಎ ವಿದ್ಯಾರ್ಥಿಗಳಿಗೆ ನಿಮಾನ್ಸ್ ಬೆಂಗಳೂರು ಮತ್ತು ಯುವ ಸ್ಪಂದನ ಮಂಗಳೂರು ಇದರ ಸಹಯೋಗದೊಂದಿಗೆ ಜೀವನ ಕೌಶಲ ಕಾರ್ಯಾಗಾವನ್ನು ಹಮ್ಮಿಕೊಳ್ಳಲಾಯಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಲಕಟ್ಟೆ ಇಲ್ಲಿನ ಪ್ರಾಂಶುಪಾಲರಾದ ಪ್ರೊ ಗಣಪತಿಭಟ್ ಕುಳಮರ್ವ ಇವರು ವಹಿಸಿಕೊಂಡಿದ್ದರು. ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಕಾಂತ್ ಪೂಜಾರಿ ಬಿರಾವು ಹಾಗೂ  ಶಾಂತಪ್ಪ ಇವರು ಆಗಮಿಸಿದ್ದರು. ಮುಖ್ಯ ಅತಿಥಿಗಳಾಗಿ ICAQ ಸಂಚಾಲಕರಾದ ಪ್ರೊ ರವಿಶಂಕರ್ ಬಿ, ಪ್ರೊ ವಿಶಾಲ್ ಪಿಂಟೋ, ಪ್ರೊ ದೀಕ್ಷಿತ ವರ್ಕಾಡಿ ಹಾಗೂ ಪ್ರೊ ಪ್ರೀತಿ ಕೆ ರಾವ್ ಇವರು ಉಪಸ್ಥಿತರಿದ್ದರು. ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾದಿಕಾರಿಯಾದ ಪ್ರೂ ರಾಜೇಶ್ವರಿ ಎಚ್ ಎಸ್ ಹಾಗೂ ಪ್ರೂ ಸಂತೋಷ್ ಪ್ರಭು ಎಂ ಇವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವು ವಿದ್ಯಾ ಅವರ ನಿರೂಪಣೆಯಲ್ಲಿ ಮಧುರ ಅವರು ಬಂದ ಅತಿಥಿಗಳನ್ನು ಸ್ವಾಗತಿಸಿದರು ಹಾಗೂ ಚೈತ್ರ ಇವರು ಎಲ್ಲರಿಗೂ ವಂದಿಸಿದರು. ಕಾರ್ಯಕ್ರಮ ದಲ್ಲಿ ಎಲ್ಲಾ ಪ್ರಥಮ ಬಿಎ ಹಾಗೂ ಬಿಬಿಎ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮ ವನ್ನು ಯಶಸ್ವಿಗೂಳಿಸಿದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...