ಕಲ್ಲಡ್ಕ: ಅ.30ನೇ ಶನಿವಾರ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇಲ್ಲಿಯ ಎಲ್ಲಾ ವಿಭಾಗದ ಅಧ್ಯಾಪಕರಿಗೆ ಹಾಗೂ ಉಪನ್ಯಾಸಕರಿಗೆ ಒಂದು ದಿನದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಕಾರ್ಯಾಗಾರ ಪದವಿ ವಿಭಾಗದ ಸಾಧನಾ ಸಭಾಭವನದಲ್ಲಿ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಣ ತಜ್ಞ, ಖ್ಯಾತ ಬರಹಗಾರರಾದ ರೋಹಿತ್ ಚಕ್ರತೀರ್ಥರವರು ಭಾಗವಹಿಸಲಿದ್ದಾರೆ ಎಂದು ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


