Saturday, January 31, 2026

” ನಮ್ಮ ತ್ಯಾಜ್ಯ ನಮ್ಮ ಹೊಣೆ” ಕಾರ್ಯಗಾರ

ಬಂಟ್ವಾಳ: ಜಿ.ಪಂ.ಮಂಗಳೂರು, ತಾಲೂಕು ಪಂಚಾಯತ್ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಚ್ಚ ಭಾರತ ಮಿಷನ್(ಗ್ರಾ)  ಕಾರ್ಯಕ್ರಮ ದಡಿ ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ ಫೆ.2 ರಂದು ” ನಮ್ಮ ತ್ಯಾಜ್ಯ ನಮ್ಮ ಹೊಣೆ” ಪರಿಕಲ್ಪನೆಯಲ್ಲಿ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆ ತರಭೇತಿ ಕಾರ್ಯಗಾರ ನಡೆಯಿತು. ‌
ಈ ಸಂದರ್ಭದಲ್ಲಿ ತಾ.ಪಂ ಅದ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್  ಆಲಿ, ಸ್ಥಾಯಿ ಸಮಿತಿ ಅದ್ಯಕ್ಷೆ ಧನಲಕ್ಮೀ ಸಿ.ಬಂಗೇರ, ಇಒ ರಾಜಣ್ಣ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ಮತ್ತು ತ್ಯಾಜ್ಯ ಗಳ ಸಮಗ್ರ ನಿರ್ವಹಣೆ ಯ ದ್ರಷ್ಟಿಯಿಂದ ತರಬೇತಿ ಕಾರ್ಯಕ್ರಮ ವನ್ನು ಆಯೋಜಿಸಲಾಗಿದ್ದು ಈ ಕಾರ್ಯಗಾರದಲ್ಲಿ ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷ ರು, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರು, ತಾ.ಪಂ.ಸದಸ್ಯ ರು, ಜಿ.ಪಂ.ಸದಸ್ಯರು, ಪಂ.ಅಭಿವೃದ್ಧಿ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಯ ಅಧಿಕಾರಿಗಳು ಭಾಗವಹಿಸಿದ್ದರು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...