Monday, January 26, 2026

ಕಟೀಲು ದೇವಸ್ಥಾನದ ಬಳಿ ಇದ್ದ ಅಶ್ವಥ ಮರವನ್ನು ಯಶಸ್ವಿಯಾಗಿ ಶಿಫ್ಟ್ ಮಾಡಿದ ಜೀತ್ ಮಿಲಾನ್ ರೋಚ್ ತಂಡ

ಕಟೀಲು: ದೇವಸ್ಥಾನದ ಬಳಿ ಇದ್ದ ಮೂರು ಅಶ್ವಥ ಮರಗಳನ್ನು ಯಶಸ್ವಿಯಾಗಿ ಶಿಫ್ಟ್ ಮಾಡಲಾಯಿತು. ಕಟೀಲು ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಈ ಮರಗಳ ಶಿಪ್ಟಿಂಗ್ ಕಾರ್ಯ ನಡೆಯುತ್ತಿದೆ.

ಶತಮಾನದ ಒಂದೊಂದು ಮರಗಳು 70ಟನ್ ಗಿಂತ ಹೆಚ್ಚು ತೂಕವಿರುವ ಈ ಮರಗಳನ್ನು ಮತ್ತೊಂದು ಜಾಗಕ್ಕೆ ಶಿಫ್ಟ್ ಮಾಡುವ ಮೂಲಕ ಮರಗಳನ್ನು ಉಳಿಸುವ ಕೆಲಸವನ್ನು ಕುಡ್ಲದ ಜೀತ್ ಮಿಲಾನ್ ರೋಚ್ ಅವರ ತಂಡ ಮಾಡಿದೆ. ಇದಕ್ಕಾಗಿ ತಂಡ 24 ಗಂಟೆಗಳ ಕಾಲ ನಿರಂತರ ಕೆಲಸದಲ್ಲಿ ತೊಡಗಿಸಿಕೊಂಡಿತು. ಈಗಾಗಲೇ ಇಂತಹ ಸಾಕಷ್ಟು ಮರಗಳನ್ನು ಶಿಫ್ಟ್ ಮಾಡಿ ನಂತರ ಅದನ್ನು ಅಷ್ಟೇ ಚೆನ್ನಾಗಿ ಬದುಕಿಸಿದ ಕೀರ್ತಿ ಜೀತ್ ಅವರಿಗೆ ಸಲ್ಲುತ್ತದೆ.

More from the blog

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...

ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ : ತಹಶೀಲ್ದಾರ್ ಜಿ. ಮಂಜುನಾಥ್

ಬಂಟ್ವಾಳ : ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಎಲ್ಲರನ್ನು ಒಳಗೊಂಡ ಸಮೃದ್ಧ ಭಾರತವನ್ನು ಸಂವಿಧಾನದ ಶಕ್ತಿಯಜೊತೆ ನಿರ್ಮಿಸೋಣ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಜಿ ಮಂಜುನಾಥ್ ಹೇಳಿದರು. ಬಂಟ್ವಾಳ ತಾಲೂಕು ರಾಷ್ಟ್ರೀಯ...

ಸುಭದ್ರ ಜಾತ್ಯತೀತ ಹಿಂದು ಸಮಾಜ ನಿರ್ಮಾಣವಾಗಬೇಕು – ವಜ್ರದೇಹಿ ಶ್ರೀ

ವಿಟ್ಲ: ಹಿಂದು ಸಮಾಜ ಪ್ರಸಕ್ತ ಪರಿಸ್ಥಿತಿಯಲ್ಲೂ ಎಚ್ಚೆತ್ತುಕೊಳ್ಳದಿದ್ದರೆ ಹಿಂದುಗಳು ಗಂಡಾಂತರ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು. ಜಾತಿ ಸಮುದಾಯಗಳು ಒಟ್ಟಾಗಿ ಸುಭದ್ರ ಜಾತ್ಯತೀತ ಹಿಂದು ಸಮಾಜ ನಿರ್ಮಾಣವಾಗಬೇಕು. ಹೀಗಾದಾಗ ಮಾತ್ರ ರಾಜಕೀಯ ಷಡ್ಯಂತ್ರಗಳನ್ನು ಮೆಟ್ಟಿ ಮುನ್ನಡೆಯ...