Monday, January 26, 2026

ಕಟೀಲು ಕ್ಷೇತ್ರಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಸಚಿವ ರಾಜನಾಥ್ ಸಿಂಗ್

ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ ನಡೆಯುತ್ತಿದ್ದು ಈ ಸಂಧರ್ಭ ಕೇಂದ್ರ ರಕ್ಷಣಾ ಸಚಿವ ರಾಜಾನಾಥ್ ಸಿಂಗ್ ಸೋಮವಾರ ಸಂಜೆ ಭೇಟಿ‌ ನೀಡಿ ಪೂಜೆ ಸಲ್ಲಿಸಿದರು.

ಕಟೀಲು ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು,ಅನುವಂಶಿಕ ಅರ್ಚಕ ವಾಸುದೇವ ಅಸ್ರಣ್ಣ ಸಚಿವರನ್ನು ಸ್ವಾಗತಿಸಿದರು.ಅರ್ಚಕರು ಕಟೀಲು ದೇವಿಯ ಕ್ಷೇತ್ರ ಪುರಾಣ ವಿವರಿಸಿದರು.
ಸಚಿವರಿಗೆ ತೀರ್ಥ ಪ್ರಸಾದ, ದೇವರ ಶೇಷ ವಸ್ತ್ರ ಹಾಗೂ ದೇವರ ಬೆಳ್ಳಿಯ ದೇವರ ಬಾವಚಿತ್ರವನ್ನು ನೀಡಿ ಗೌರವಿಸಲಾಯಿತು.

ಈ ಸಂಧರ್ಭ
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್.ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ.ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ .ಬಿಜೆಪಿಯ ಪ್ರಮುಖ ಮುಖಂಡರು.ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...