Friday, June 27, 2025

ಕಾವಳಮೂಡೂರು ಶ್ರೀ ರಾಜನ್‌ದೈವ ಕೊಡಮಣಿತ್ತಾಯಿ ದೈವಸ್ಥಾನ ಮಾ.19-22 : ವಾರ್ಷಿಕ ಜಾತ್ರೋತ್ಸವ

ಬಂಟ್ವಾಳ: ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಕಾವಳಮಾಗಣೆ ಶ್ರೀ ರಾಜನ್‌ದೈವ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ ಮಾ.19ರಿಂದ ಮಾ.22ರವರೆಗೆ ಜರಗಲಿದೆ.
ಮಾ.19ರಂದು ಬೆಳಗ್ಗೆ ಶ್ರೀ ಕ್ಷೇತ್ರದಲ್ಲಿ ಪ್ರಾರ್ಥನೆ, ಸಂಜೆ ಬಲ್ಲೋಡಿ ಮಾಗಣೆ ಗುತ್ತಿನಿಂದ ಶ್ರೀ ಕೊಡಮಣಿತ್ತಾಯಿ ದೈವದ ಭಂಡಾರ ಹೊರಟು ಕಾವಳಕಟ್ಟೆ ದೈವಸ್ಥಾನಕ್ಕೆ ಆಗಮನ, ರಾತ್ರಿ ಧ್ವಜಾರೋಹಣ, ಚೆಂಡು ಹಾಕುವುದು, ಬಲಿ ಉತ್ಸವ, ದೈವ ದರ್ಶನ, ಮಾ.20ರಂದು ಸಂಜೆ ಬಲಿ ಉತ್ಸವ, ದೈವ ದರ್ಶನ, ಮಾ.21ರಂದು ಬೆಳಗ್ಗೆ ಗಣಪತಿ ಹೋಮ, ಸಂಜೆ ಹೂವಿನ ಪೂಜೆ ಆರಂಭ, ಇತರ ಸೇವೆಗಳು-ಅಂಕ ಅಂಬೋಡಿ, ಮುಂಡೇವು, ಸೂಟೆದಾರ, ಕಾವಳಕಟ್ಟೆ ಬಸದಿಯಲ್ಲಿ ಪಂಚಾಮೃತಾಭಿಷೇಕ, ರಾತ್ರಿ ಅನ್ನಸಂತರ್ಪಣೆ, ಶ್ರೀ ರಾಜನ್ ದೈವ ಕೊಡಮಣಿತ್ತಾಯ ದೈವದ ನೇಮೋತ್ಸವ, ಬಲಿ ಉತ್ಸವ, ದರಿ ದೀಪೋತ್ಸವ, ಹುಲಿಬಂಡಿ ಉತ್ಸವ, ಕುದುರೆ ಬಂಡಿ ಉತ್ಸವ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸ್ಥಳೀಯರಿಂದ ಡಬಲ್ ಗೇಮ್ ತುಳುನಾಟಕ ಪ್ರದರ್ಶನವಿದೆ. ಮಾ.೨೨ರಂದು ಬೆಳಗ್ಗೆ ಧ್ವಜಾವರೋಹಣ, ಕುರುತಂಬಿಲ ನೇಮ, ಶ್ರೀ ಕ್ಷೇತ್ರದಿಂದ ಶ್ರೀ ಕೊಡಮಣಿತ್ತಾಯಿ ದೈವದ ಭಂಡಾರ ಬಲ್ಲೋಡಿ ಮಾಗಣೆ ಗುತ್ತಿಗೆ ನಿರ್ಗಮನ ನಡೆಯಲಿದೆ ಎಂದು ಆನುವಂಶಿಕ ಆಡಳಿತ ಮೊಕ್ತೇಸರ ಬಿ.ಭರತ್ ಕುಮಾರ್ ಜೈನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...