ಬಂಟ್ವಾಳ: ತಾ.ಪಂ. ಬಂಟ್ವಾಳ, ಕೃಷಿ ಇಲಾಖೆ ಬಂಟ್ವಾಳ, ಕಾವಳಮೂಡೂರು ಗ್ರಾಮ ಪಂಚಾಯತ್ ಇದರ ಆಶ್ರಯದಲ್ಲಿ ರೈತರಿಗೆ ಬೆಳೆ ಸಮೀಕ್ಷೆ ತರಬೇತಿ ಕಾರ್ಯಕ್ರಮ ಸೋಮವಾರ ಕಾವಳಮೂಡೂರು ಗ್ರಾ.ಪಂ.ಕಚೇರಿ ಸಭಾಂಗಣದಲ್ಲಿ ನಡೆಯಿತು.

ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮಿ ಅವರು ಅಧ್ಯಕ್ಷತೆ ವಹಿಸಿದ್ದರು. ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ನಂದನ್ ಶೆಣೈ ಅವರು ಬೆಳೆ ಸಮೀಕ್ಷೆ ಬಗ್ಗೆ ಮಾಹಿತಿ ನೀಡಿದರು.ಬೆಳೆ ಸಮೀಕ್ಷೆ ಮೊಬಲ್ ಆಪ್ ಬಗ್ಗೆ ಆತ್ಮ ಯೋಜನೆ ತಾಂತ್ರಿಕ ವ್ಯವಸ್ಥಾಪಕ ಹನುಮಂತ ಕಾಳಗಿ ಅವರು ಮಾಹಿತಿ ನೀಡಿದರು.ಪಂ.ಅ.ಅಧಿಕಾರಿ ರಚನ್ ಕುಮಾರ್ ಅವರು ರೈತ ಬಂಧು ಯೋಜನೆಯಡಿ ಎರೆಹುಳು ತೊಟ್ಟಿ ನಿರ್ಮಾಣ ಕುರಿತು ಮಾಹಿತಿ ನೀಡಿದರು. ಗ್ರಾ.ಪಂ.ಉಪಾಧ್ಯಕ್ಷ ಅಜಿತ್ ಕುಮಾರ್ ಕಾರಿಂಜ, ಗ್ರಾಮ ಕರಣಿಕೆ ಆಶಾ ಮೆಹಂದಳೆ, ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು.
