Friday, July 4, 2025

ಸಿದ್ದಗಂಗ ಶ್ರೀಗಳು ಬರೆದಿರುವ ಒಂದು ಕವಿತೆ

ಸಾಧ್ಯವಾದರೆ ಓಡು
ಆಗಲಿಲ್ಲವಾದರೆ ನಡೆ
ಅದೂ ಸಾಧ್ಯವಾಗದಿರೆ
ಉರುಳಿ ಕೊಂಡು ಹೋಗು ಅಷ್ಟೇ!

ಆದರೆ ಕದಲದೇ
ಬಿದ್ದಿರಬೇಡ ಒಂದೇ ಕಡೆ

ಕೆಲಸ ಸಿಗಲಿಲ್ಲವೆಂದು,
ವ್ಯಾಪಾರ ನಷ್ಟವಾಯಿತೆಂದು
ಗೆಳೆಯನೊಬ್ಬ ಮೋಸಮಾಡಿದನೆಂದು,
ಪ್ರೀತಿಸಿದವಳು
ಕೈಬಿಟ್ಟಳೆಂದು!!

ಹಾಗೆ ಇದ್ದರೆ ಹೇಗೆ..?
ದಾಹಕ್ಕೆ ಬಾರದ
ಸಮುದ್ರದ ಅಲೆಗಳು ಕೂಡಾ
ಕುಣಿದು ಕುಪ್ಪಳಿಸುತ್ತವೆ ನೋಡು!

ಮನಸು ಮಾಡಿದರೇ…
ನಿನ್ನ ಹಣೆಬರಹ ಇಷ್ಟೇ
ಅಂದವರೂ ಸಹ…
ನಿನ್ನ ಮುಂದೆ ತಲೆ ತಗ್ಗಿಸುವ
ತಾಕತ್ತು ನಿನ್ನಲ್ಲಿದೆ

ಅಂತದ್ದರಲ್ಲಿ ಈ ಪುಟ್ಟ ಕಷ್ಟ ಕೋಟಲೆಗೆ ತಲೆ ಬಾಗಿದರೆ ಹೇಗೆ?

ಸೃಷ್ಟಿ ಚಲನಶೀಲ
ಯಾವುದೂ ನಿಲ್ಲಬಾರದು

ಹರಿಯುವ ನದಿ
ಬೀಸುವ ಗಾಳಿ
ತೂಗುವ ಮರ
ಹುಟ್ಟೋ ಸೂರ್ಯ
ಅಂದುಕೊಂಡಿದ್ದನ್ನು ಸಾಧಿಸಬೇಕೆಂದು
ನಿನ್ನಲ್ಲಿ ಛಲದಿಂದ ಹರಿಯುವ ರುಧಿರ ಸಹ

ಯಾವುದೂ ನಿಲ್ಲಬಾರದು.
ಏಳು… ಎದ್ದೇಳು
ಹೊರಡು…
ನಿನ್ನನ್ನು ಅಲಗಾಡದಂತೆ
ಮಾಡಿದ ಆ ಮಾನಸಿಕ ‌ಸಂಕೋಲೆಗಳನ್ನು ಬೇಧಿಸು,
ಬಿದ್ದ ಜಾಗದಿಂದಲೇ
ಓಟ ಶುರು ಮಾಡು

ನೀನು ಮಲಗಿದ ಹಾಸಿಗೆ
ನಿನ್ನನ್ನು ಅಹಸ್ಯಪಡುವ ಮುನ್ನ
ಅಲಸ್ಯವನ್ನು ಬಿಡು

ಕನ್ನಡಿ ನಿನ್ನನ್ನು ಪ್ರಶ್ನಿಸುವ
ಮುನ್ನ ಉತ್ತರ ಹುಡುಕು

ನೆರಳು ನಿನ್ನನ್ನು ಬಿಡುವ
ಮುನ್ನ ಬೆಳಕಿಗೆ ಬಾ

ಮತ್ತೆ ಹೇಳುತ್ತಿದ್ದೇನೆ…
ಕಣ್ಣೀರು ಸುರಿಸುವುದರಿಂದ
ಅದು ಸಾಧ್ಯವಿಲ್ಲ!
ಬೆವರು ಸುರಿಸುವುದರಿಂದ
ಮಾತ್ರ ಚರಿತ್ರೆ
ಸೃಷ್ಟಿಸಬಹುದೆಂದು
ತಿಳಿದುಕೋ…

ಓದಿದರೆ ಇವು ಪದಗಳಷ್ಟೇ…
ಆದರೆ ಆಚರಿಸಿದಾಗ
ಅಸ್ತ್ರಗಳು..!!!!!
ಮಹಾ ಶಸ್ತ್ರಗಳು!!!!!!!

*ಯಾರು ನಮ್ಮ ಶ್ರಮವನ್ನು ಗಮನಿಸುವುದಿಲ್ಲ..*
*ಯಾರು ನಮ್ಮ ನ್ಯಾಯವನ್ನು ಗಮನಿಸುವುದಿಲ್ಲ…*
*ಯಾರು ನಮ್ಮ ನೋವನ್ನು ಗಮನಿಸುವುದಿಲ್ಲ…*
*ಆದರೆ*
*”ಎಲ್ಲರೂ ನಾವು ಮಾಡುವ ತಪ್ಪನ್ನು ಗಮನಿಸುತ್ತಾರೆ
*ಎಚ್ಚರ*

More from the blog

ಬ್ರೋಕರ್ ಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ: ಬೇಬಿ ಕುಂದರ್….

ಬಂಟ್ವಾಳ : ಬ್ರೋಕರ್ ಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಜನರ ಸಮಸ್ಯೆ ಪರಿಹಾರ ಮಾಡುತ್ತೇನೆ, ಭ್ರಷ್ಟಾಚಾರ ರಹಿತ ಕೆಲಸಕ್ಕೆ ಒತ್ತು ನೀಡುವುದಾಗಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ‌ಕುಂದರ್ ತಿಳಿಸಿದ್ದಾರೆ. ನಗರ ಯೋಜನಾ ಪ್ರಾಧಿಕಾರದ...

ಅನಂತಾಡಿ : ಸ್ವಚ್ಛತಾ ನೌಕರರಿಗೆ ಸ್ವಚ್ಛತಾ ಪರಿಕಾರ ಸಮೇತ ಸಮವಸ್ತ್ರ,’ಸ್ವಚ್ಛ ಸಖಿ’ ನಾಮಕರಣ..

ಬಂಟ್ವಾಳ : ಅನಂತಾಡಿ ಗ್ರಾಮ ಪಂಚಾಯತ್ ನ ಘನ ತ್ಯಾಜ್ಯ ಘಟಕದ ಸ್ವಚ್ಛತಾ ಸಿಬ್ಬಂದಿಗಳಿಗೆ ಸ್ವಚ್ಛತಾ ಪರಿಕಾರ ಸಮೇತ ಸಮವಸ್ತ್ರ ವಿತರಿಸಿ "ಸ್ವಚ್ಛಸಖಿ" ಎಂದು ನಾಮಕರಣ ಮಾಡುವ ಬ್ರಾಂಡಿಂಗ್ ಕಾರ್ಯಕ್ರಮ ಜು. 4ರಂದು...

ದ. ಕ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ಫೋರ್ಸ್ ರಚನೆ – ಸಿಎಂಗೆ ಬಿ. ರಮಾನಾಥ ರೈ ಅಭಿನಂದನೆ..

ಬೆಂಗಳೂರು :  ದ.ಕ.ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಸರಣಿ ಕೊಲೆಗಳು ಮತೀಯ ಸಂಘರ್ಷಣೆಗಳನ್ನು ಮಟ್ಟ ಹಾಕುವ ಸಲುವಾಗಿ ಕರ್ನಾಟಕ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ದ.ಕ.ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್...

ಅಡಿಕೆ ವ್ಯಾಪಾರಿಯಿಂದ ವಂಚನೆ ಪ್ರಕರಣ  : ನ್ಯಾಯಕ್ಕಾಗಿ ಶಾಸಕ ರಾಜೇಶ್ ನಾಯ್ಕ್ ಗೆ ಮನವಿ

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ‌ರೂಪಾಯಿ ವಂಚಿಸಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಅಶೋಕ್ ಶೆಟ್ಟಿ ಸರಪಾಡಿ ನೇತೃತ್ವದಲ್ಲಿ ರೈತರು ನ್ಯಾಯಕ್ಕಾಗಿ ಶಾಸಕ ರಾಜೇಶ್ ನಾಯ್ಕ್ ಅವರನ್ನು ಬೇಟಿಯಾಗಿ ಮನವಿ ನೀಡಿದ್ದಾರೆ. ಬಳಿಕ...