Sunday, January 25, 2026

ಕೆ. ಡಿ. ಪಿ ಸಭೆ : ಬಂಟ್ವಾಳ ‌ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಹುದ್ದೆ ಭರ್ತಿ ಬಗ್ಗೆ ಶಾಸಕ ರಾಜೇಶ್ ನಾಯ್ಕ್ ಪ್ರಸ್ತಾಪ

ಬಂಟ್ವಾಳ : ಬಂಟ್ವಾಳ ‌ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ಪ್ರಸೂತಿ ತಜ್ಞರು ಹಾಗೂ ಅರಿವಳಿಕೆ ತಜ್ಞರ ಹುದ್ದೆಗೆ ಶೀಘ್ರವಾಗಿ ಭರ್ತಿ‌ಮಾಡುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕೆ.ಡಿ.ಪಿ.ಸಭೆಯಲ್ಲಿ ಪ್ರಸ್ತಾಪಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕರು ಸಚಿವರ ಗಮನಕ್ಕೆ ತಂದರು.

ಎರಡು ಪ್ರಮುಖ ಹುದ್ದೆಯಲ್ಲಿ ಸೇವೆ ಸಲ್ಲಿಸುವವರಿಲ್ಲದೆ ತಾಲೂಕಿನ ‌ಜನತೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ಸುಮಾರು ‌50℅ ಮಹಿಳೆಯರು ಹೆರಿಗೆಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗುತ್ತಿದ್ದು, ಬಹಳ ಅಗತ್ಯವಾಗಿ ಹುದ್ದೆಗಳನ್ನು ಭರ್ತಿ‌ಮಾಡುವಂತೆ ಸಚಿವರಿಗೆ ತಿಳಿಸಿದರು.

ಶಾಸಕರ ಮಾತಿಗೆ ಸ್ಪಂದಿಸಿದ ಉಸ್ತುವಾರಿ ಸಚಿವರು ಆರೋಗ್ಯ ಇಲಾಖೆಯ ಅಧಿಕಾರಿಗಳಲ್ಲಿ ಈ ಬಗ್ಗೆ ಮಾಹಿತಿ ‌ಪಡೆದು, ತಿಂಗಳೊಳಗೆ ಎರಡು ಹುದ್ದೆಯನ್ನು ಭರ್ತಿ ‌ಮಾಡುವುದಾಗಿ ಭರವಸೆ ನೀಡಿದರು.

ಇದರ ಜೊತೆಗೆ ಜಿಲ್ಲೆಯಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಮತ್ತು ನಿರುದ್ಯೋಗ ಸೃಷ್ಟಿ ಮಾಡಿದ ಮರಳು ಮತ್ತು ಕೆಂಪುಕಲ್ಲಿನ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ಒಕ್ಕೊರಲಿನಿಂದ ಆಗ್ರಹ ಮಾಡಿದರು.

More from the blog

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ ವಿರುದ್ಧ FIR

  ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಭವಿಷ್ಯತ ಅಭ್ಯರ್ಥಿಯಾಗಿ ಹೆಸರು ಮುನ್ನೆಲೆಗೆ ಬಂದಿದ್ದ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ವಿರುದ್ಧ FIR ದಾಖಲಾಗಿರುವುದು ಪುತ್ತೂರಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜ.21 ರಂದು ಹಿಂದೂ ಮುಖಂಡ...

ವಿಟ್ಲ ಜಾತ್ರೋತ್ಸವದಲ್ಲಿ ಮನರಂಜಿಸಿದ ವಿಟ್ಲೋತ್ಸವ..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಕಾಲಾವಧಿ ಜಾತ್ರೋತ್ಸವದಲ್ಲಿ ಮಂಗಳವಾರ ರಾತ್ರಿ ದೇವರ ಹೂ ತೇರು ಉತ್ಸವ ನಡೆಯಿತು. ವಿಆರ್ ಸಿ ವಿಟ್ಲ ಇದರ ಆಶ್ರಯದಲ್ಲಿ ರಮಾನಾಥ ವಿಟ್ಲ ಸಾರಥ್ಯದಲ್ಲಿ 33...

ಮಾಣಿ : ಸ್ವಚ್ಛ ಗ್ರಾಮ ಅಭಿಯಾನ ಕಾರ್ಯಕ್ರಮ..

ಬಂಟ್ವಾಳ : ಮಾಣಿ ಗ್ರಾಮ ಪಂಚಾಯತ್, ಜನ ಶಿಕ್ಷಣ ಟ್ರಸ್ಟ್, ಮಹಿಳಾ ಸಾಂತ್ವನ ಕೇಂದ್ರ ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಾಣಿಕ್ಯ ಸಂಜೀವಿನಿ ಒಕ್ಕೂಟ ಹಾಗೂ ಸಂಘ ಸಂಸ್ಥೆಗಳ ಜಂಟಿ...