Tuesday, July 15, 2025

ಕುಡಿಯುವ ನೀರಿನ ಸಮಸ್ಯೆ ಬರಕೂಡದು: ರಾಜಣ್ಣ

ಬಂಟ್ವಾಳ: ಫೆಬ್ರವರಿ ತಿಂಗಳಾಂತ್ಯಕ್ಕೆ ತಾಲೂಕಿನ ಕೆಲ ಭಾಗಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದ್ದು, ಸಮಸ್ಯೆ ಪರಿಹಾರಕ್ಕೆ ಈಗಿಂದಲೇ ಕಾರ್ಯನಿರ್ವಹಿಸುವಂತೆ ತಾಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಂಟ್ವಾಳ ತಾಲೂಕು ಪಂಚಾಯತ್ ಮಾಸಿಕ ಕೆಡಿಪಿ ಸಭೆಯು ಬಿ.ಸಿ.ರೋಡ್ ನ ತಾಪಂ ಎಸ್ ಜಿ ಎಸ್ ವೈ ಸಭಾಂಗದಲ್ಲಿ ಮಂಗಳವಾರ ನಡೆಯಿತು.
ಕುಡಿಯುವ ನೀರಿನ ಅಭಾವವಿರುವ ಗ್ರಾಮದಲ್ಲಿ ಜಿಪಂ ಅನುದಾನ ಬಳಸಿ ಹೊಸ ಕೊಳವಿ ಬಾವಿಯನ್ನು ನಿರ್ಮಿಸಿ. ಅಲ್ಲದೆ, ಪಾಲುಬಿದ್ದ ಕೊಳವೆ ಬಾವಿಯನ್ನು ನವೀಕರಿಸುವ ಅಥವಾ ಇನ್ನೊಂದು ಕಡೆ ಜೋಡಿಸುವ ಕಾಮಗಾರಿಯನ್ನು ನಡೆಸುವಂತೆ ತಾಪಂ ಇಒ ರಾಜಣ್ಣ ಅವರು ಮೆಸ್ಕಾಂ ಅಧಿಕಾಗಳಿಗೆ ಸೂಚನೆ ನೀಡಿದರು.


ಬಂಟ್ವಾಳ ಅರಣ್ಯ ವಲಯಾಧಿಕಾರಿ ಸುರೇಶ್ ಸಭೆಗೆ ಮಾಹಿತಿ ನೀಡಿ, ಅರಣ್ಯ ಇಲಾಖೆಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಎಸ್ಸಿ, ಎಸ್ಟಿ ಹಾಗೂ ಅರಣ್ಯ ಪ್ರದೇಶದ ನಿವಾಸಿಗಳಿಗೆ ಎಲ್ಪಿಜಿ ಗ್ಯಾಸ್ ಸೌಲಭ್ಯವಿದ್ದು, ಈ ಬಗ್ಗೆ 50 ಗ್ರಾಮಗಳಿಗೆ ಅರ್ಜಿ ಸಹಿತ ಮಾಹಿತಿ ನೀಡಲಾಗಿದೆ. ಆದರೆ, 4 ಗ್ರಾಮಗಳ 17 ಅರ್ಜಿಗಳು ಮಾತ್ರ ಬಂದಿವೆ ಎಂದು ತಿಳಿಸಿದರು.
ಅರಣ್ಯ ಪ್ರದೇಶದಲ್ಲಿರುವ ಗ್ರಾಮಗಳಿಗೆ ಎಸ್ಸಿ, ಎಸ್ಟಿ ಗ್ಯಾಸ್ ಯೋಜನೆಯ ಫಲಾನುಭವಿಗಳ ಆಯ್ಕೆಯ ಬಗ್ಗೆ ಅಧ್ಯಕ್ಷರಿಗೆ ಜವಾಬ್ದಾರಿ ನೀಡಿ, ಮತ್ತೊಮ್ಮೆ ಪರಿಶೀಲನೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ ಮಾಡಲಾಯಿತು.
ತಾಲೂಕು ಆರೋಗ್ಯ ಅಧಿಕಾರಿ ದೀಪಾ ಪ್ರಭು ಸಭೆಗೆ ಮಾಹಿತಿ ನೀಡಿ, ಬಂಟ್ವಾಳದಲ್ಲಿ ಮಂಗನ ಸಾವು, ಕಾಯಿಲೆ ಪ್ರಕರಣಗಳು ಇದುವರೆಗೂ ಪತ್ತೆಯಾಗಿಲ್ಲ. ಈ ಬಗ್ಗೆ ಪ್ರತೀ ಗ್ರಾಮ ಮಟ್ಟದಲ್ಲಿ ಅರಣ್ಯ, ಆರೋಗ್ಯ ಇಲಾಖೆಯ ಸಹಭಾಗಿತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದ್ದು, ನಿಂತರವಾಗಿ ಜಾಗೃತಿ ಕಾರ್ಯಾಗಾರ ನಡೆಯುತ್ತಿದೆ ಎಂದರು.
ಮುಂಜಾಗೃತಾ ಕ್ರಮವಾಗಿ ಅರಣ್ಯ ಸಿಬ್ಬಂದಿ, ಕಾಡಂಚಿನ ಪ್ರದೇಶದ ಜನರನ್ನು ಗುರುತಿಸಿ ಮೈಗೆ ಹಚ್ಚುವ ರೋಗ ನಿರೋಧಕ ಡಿಎಂಪಿ ಆಯಿಲ್ ಅನ್ನು ವಿತರಣೆ ಮಾಡಲಾಗಿದೆ. ಕಾರಿಂಜ ಸಹಿತ ತಾಲೂಕಿನ ಇತರ ಭಾಗದಲ್ಲಿ ಕಾರ್ಯಾಚರಣೆ ನಡೆಸಿ,
ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ರಕ್ತ ಮಾದರಿ ಸಂಗ್ರಹಿಸಿ ಶಿವಮೊಗ್ಗ ಲ್ಯಾಬ್ ಗೆ ಕಳುಹಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಸಂಬಂಧಿಸಿ, ಚರ್ಚೆ ನಡೆಯಿತು.
ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ತಹಶೀಲ್ದಾರ್ ರಶ್ಮಿ ಕಿಶೋರ್ ಉಪಸ್ಥಿತರಿದ್ದು, ಸಲಹೆ ನೀಡಿದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ.ಬಂಗೇರ ಹಾಜರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ, ವಂದಿಸಿದರು.

More from the blog

ತುಳುರಂಗಭೂಮಿ‌ ಕಲಾವಿದ ಮೌನೇಶ ಆಚಾರ್ಯ ನಿಧನ..

ಬಂಟ್ವಾಳ : ಪ್ರತಿಭಾನ್ವಿತ ಯುವಕ, ತುಳುರಂಗಭೂಮಿ‌ ಕಲಾವಿದ, ಕಾಪಿಕಾಡು‌ ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಇವರು ಮಂಗಳವಾರ ಮುಂಜಾನೆ ತಮ್ಮ‌ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಚಿನ್ನದ ಕೆಲಸ‌ಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ‌ ದಿನಸಿ‌ ಅಂಗಡಿ...

ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ ಸೋಮವಾರ...

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್...

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...