ಬಂಟ್ವಾಳ: ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷ ತೆಯಲ್ಲಿ ತಾ.ಪಂ.ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಶನಿವಾರ ನಡೆಯಿತು.




ಬಳಿಕ ಮಾತನಾಡಿದ ಅವರು ಎಲ್ಲಾ ಇಲಾಖೆಗಳಿಗೆ ಮಂಜೂರಾದ ಯೋಜನೆಗಳ ಕಾಮಗಾರಿ ಪೆಬ್ರವರಿ ಒಳಗೆ ಮುಗಿಯುವಂತೆ ಕೆಲಸ ಮಾಡಿ ಎಂದು ತಿಳಿಸಿದರು. ಅಧಿಕಾರಿಗಳು ಕಾಮಗಾರಿಗಳ ಬಗ್ಗೆ ನಿಗಾವಹಿಸಿ ಯಾವುದೇ ಲೋಪದೋಷಗಳಾಗದಂತೆ ನೋಡಿಕೊಳ್ಳಲು ತಿಳಿಸಿದರು.
ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿಯ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ, ತಾ.ಪ.ಇ.ಒ.ರಾಜಣ್ಣ ಉಪಸ್ಥಿತರಿದ್ದರು.