ವಿಟ್ಲ: ಬಂಟ್ವಾಳ ತಾಲೂಕು ಕೇಪು ಗ್ರಾಮ ಪಂಚಾಯಿತಿಯಲ್ಲಿ ೨೫ ವರ್ಷಗಳ ಕಾಲ ಪಂಚಾಯಿತಿ ಬಿಲ್‌ಕಲೆಕ್ಟರ್‌ರಾಗಿ, ಗುಮಾಸ್ತರಾಗಿ ಕರ್ತವ್ಯ ನಿರ್ವಹಿಸಿ ಇದೀಗ ಪದೋನ್ನತಿ ಹೊಂದಿ ಪೂತ್ತೂರು ತಾಲೂಕಿನ ಮುಂಡೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿ ನಿಯೋಜನೆಗೊಂಡ ಸುರೇಶ್ ನಾಯ್ಕ ಕೆ. ಕೋಡಂದೂರು ಅವರನ್ನು ಕೇಪು ಗ್ರಾಮ ಪಂಚಾಯತ್‌ನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರಿಂದ ಅಭಿನಂದಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ ಕುಕ್ಕೆಬೆಟ್ಟು, ಉಪಾಧ್ಯಕ್ಷರಾದ ಯಶಸ್ವಿನಿ ಶಾಸ್ತ್ರಿ ನೆಕ್ಕರೆ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿ ಪಿಡಿಒ, ಪಂಚಾಯಿತಿ ಸಿಬ್ಬಂದಿ, ಗ್ರಂಥಾಲಯ ಮೇಲ್ವಿಚಾರಕಿ ಉಪಸ್ಥಿತರಿದ್ದರು.


