ವಿಟ್ಲ: ವಿಟ್ಲದ ಕೇಪು ಗ್ರಾಮದ ಕುಕ್ಕೆಬೆಟ್ಟು ಎಂಬಲ್ಲಿ ಸೋಮವಾರ ಕಾಮಗಾರಿಗೆ ಜಲ್ಲಿ ಕಲ್ಲುಗಳನ್ನು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ಕಳೆದು ರಸ್ತೆಗೆ ಉರುಳಿದ ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ.
ಅಜ್ಜಿನಡ್ಕ ಕಡೆಯಿಂದ ಪೆರ್ಲ ರಸ್ತೆಯಲ್ಲಿ ನಡೆಯುತ್ತಿದ್ದ ರಸ್ತೆ ಕಾಮಗಾರಿಗೆ ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಕೇಪು ಗ್ರಾಮದ ಕುಕ್ಕೆಬೆಟ್ಟು ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದು ರಸ್ತೆಗೆ ಉರುಳಿದೆ. ಘಟನೆ ವೇಳೆ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ. ಜಲ್ಲಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಪರಿಣಾಮ ಕೆಲ ಹೊತ್ತು ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ.

