Friday, June 27, 2025

ಕೇರಳ-ಕರ್ನಾಟಕ ಗಡಿ ವಿವಾದ ಅಂತ್ಯ: ಆಂಬುಲೆನ್ಸ್ ಸಂಚಾರಕ್ಕೆ ಅವಕಾಶ

ಕೇರಳ : ಕೊನೆಗೂ ಕೇರಳ-ಕರ್ನಾಟಕ ಗಡಿ ವಿವಾದಕ್ಕೆ ತೆರೆ ಬಿದ್ದಿದ್ದೆ.
ವೈದ್ಯಕೀಯ ಪ್ರಮಾಣ ಪತ್ರವನ್ನು ಹಾಜರುಪಡಿಸಿ ಆಂಬುಲೆನ್ಸ್‌ ಮೂಲಕ ರೋಗಿಗಳನ್ನು ಗಡಿ ಮೂಲಕ ಕೇರಳದಿಂದ ಕರ್ನಾಟಕದ ಆಸ್ಪತ್ರೆಗೆ ದಾಖಲಿಸಲು ಕರ್ನಾಟಕ ಒಪ್ಪಿಗೆ ನೀಡಿದೆ ಎಂದು ಕೇರಳ ಸಿ.ಎಂ. ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.
ಕೊರೊನಾ ಸೋಂಕು ಇಲ್ಲದೇ ಇರುವ ರೋಗಿಗಳನ್ನಷ್ಟೇ ಕರ್ನಾಟಕದ ಒಳಗೆ ಬಿಡಲಾಗುವುದು. ಕರ್ನಾಟಕದ ವೈದ್ಯರ ತಂಡವು ಗಡಿಯಾದ ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ರೋಗಿಗಳ ತಪಾಸಣೆ ನಡೆಸಲಿದೆ. ಕಾಸರಗೋಡಿನ ತಲಪಾಡಿ ಮೂಲಕ ರೋಗಿಗಳನ್ನು ಮಂಗಳೂರಿಗೆ ಸಾಗಿಸಲು ಆಂಬ್ಯುಲೆನ್ಸ್‌ಗಳಿಗೆ ಅವಕಾಶ ನೀಡಲಾಗಿದೆ’ ಎಂದರು.

ಗಡಿ ತೆರೆಯಬೇಕು ಎಂಬ ವಿಚಾರದಲ್ಲಿ ಕರ್ನಾಟಕ ಮತ್ತು ಕೇರಳದ ನಡುವೆ ಪತ್ರ ವ್ಯವಹಾರಗಳು, ರಾಜೀ ಸಂಧಾನಗಳು, ನ್ಯಾಯಾಂಗ ಹೋರಾಟಗಳೂ ನಡೆದಿದ್ದವು.
ಇದ್ಯಾವುದಕ್ಕೂ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಕ್ಯಾರ್ ಮಾಡದೇ ಗಡಿ ತೆರೆಯುವ ಪ್ರಶ್ನೆಯೇ ಇಲ್ಲ ಎಂದಿದ್ದರು.

ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರೂ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಗಡಿ ತೆರೆಯಲು ಮನವಿ ಮಾಡಿದ್ದರು. ಅಲ್ಲದೆ, ಪ್ರಧಾನಿ ಮಧ್ಯಪ್ರವೇಶ ಬಯಸಿದ್ದರು. ಯಡಿಯೂರಪ್ಪ ಅವರು ಇದಕ್ಕೂ ಬಗ್ಗಿರಲಿಲ್ಲ.

ಸದ್ಯ ಕೋವಿಡ್‌ 19 ಸೋಂಕಿತರಲ್ಲದ ರೋಗಿಗಳಿಗೆ ಮಾತ್ರ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳಲು ಗಡಿ ತೆರಯಲು ಕರ್ನಾಟಕ ಸರ್ಕಾರ ಒಪ್ಪಿರುವುದಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...