Tuesday, July 8, 2025

ಮೀನು ವ್ಯಾಪಾರಿಯ ಅಪಹರಣ…..

ವಿಟ್ಲ: ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡಯೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ ನಿವಾಸಿ ಮಹಮ್ಮದ್ ಅನ್ಸಾರ್(34) ಅಪಹರಣಗೊಳಗಾದ ವ್ಯಕ್ತಿಯಾಗಿದ್ದು, ಈ ಬಗ್ಗೆ ಅವರ ಪತ್ನಿ ಅಪ್ಸ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೊಹಮ್ಮದ್‌ ಅನ್ಸಾರ್‌ (31) ಎಂಬವರು ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಬೇರೆ ವ್ಯವಹಾರ ಮಾಡುತ್ತೇನೆಂದು 2 ತಿಂಗಳ ಹಿಂದೆ ಕೇರಳಕ್ಕೆ ಹೋಗುವುದಾಗಿ ತಿಳಿಸಿ ಹೋದವರು ಕೆಲ ದಿನ ಒಂದು ಬಾರಿ ಪತ್ನಿಗೆ ಕರೆ ಮಾಡುತ್ತಿದ್ದರು. ಬಳಿಕ ಮರಳಿ ಮನೆಗೆ ಮರಳಿದ್ದರು.

ಪತ್ನಿ ಮನೆಯಲ್ಲಿ ಇಲ್ಲದಿದ್ದಾಗ ಮೊಹಮ್ಮದ್‌ ಅನ್ಸಾರ್ ಅವರನ್ನು ಯಾರೋ ಅಪರಿಚಿತರು ಬಲವಂತವಾಗಿ ಕರೆದುಕೊಂಡು ಕಾರಿನಲ್ಲಿ ಕುಳ್ಳಿರಿಸಿ ಅಪಹರಿಸಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...