Tuesday, January 27, 2026

ಮಾಣಿ ಬಿಜೆಪಿ ಶಕ್ತಿ ಕೇಂದ್ರದ ನೇತ್ರತ್ವದಲ್ಲಿ ಕಿಟ್ ವಿತರಣೆ

ಬಂಟ್ವಾಳ: ಮಲಬಾರ್ ಗೋಲ್ಡ್ ಕಂಪನಿ ವತಿಯಿಂದ ಮಾಣಿ ಶಕ್ತಿ ಕೇಂದ್ರದ ನೇತ್ರತ್ವದಲ್ಲಿ ಅಂಗನವಾಡಿ ಕಾರ್ಯಕರ್ತಯರು, ಆಶಾ ಕಾರ್ಯಕರ್ತೆ ಯರು, ಹಾಗೂ ಆರ್ಥಿಕ ವಾಗಿ ಸಂಕಷ್ಟದಲ್ಲಿರುವ ಐದು ಗ್ರಾಮದ ಫಲಾನುಗಳಿಗೆ ದಿನಬಳಕೆಯ ಆಹಾರ ವಸ್ತುಗಳ ಕಿಟ್ ವಿತರಣೆ ಕಾರ್ಯಕ್ರಮ ವೀರಕಂಭ ಗ್ರಾಮದ ಕೆಲಿಂಜ ಶ್ರೀ ನಿಕೇತನ ಮಂದಿರದಲ್ಲಿ ಇಂದು ಬೆಳಿಗ್ಗೆ ನಡೆಯಿತು.

ಕಿಟ್ ವಿತರಣೆ ನಡೆಸಿದ ಬಂಟ್ಚಾಳ ಬಿಜೆಪಿ ಆಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ ಸರಕಾರದ ನಿಯಮದ ಜೊತೆ ಗ್ರಾಮದ ಪ್ರತಿಯೊಬ್ಬ ರ ಸಹಕಾರದಿಂದ ಕೊರೊನಾ ನಿಯಂತ್ರಣ ಸಾಧಿಸಲು ಸಾಧ್ಯವಾಯಿತು.

ಆದರೆ ಕೊರೊನಾ ಸಂಕಷ್ಟದ ದಿನಗಳಲ್ಲಿ ಪರಸ್ಪರ ಸಹಕಾರ ಮನೋಭಾವದಿಂದ ಬಡಜನರ ಸೇವೆ ಮಾಡಿ ಅನೇಕರು ಪುಣ್ಯ ಕಟ್ಟಿಕೊಂಡಿದ್ದಾರೆ.

ಈ ದಿನ ಮಲಬಾರ್,ಗೋಲ್ಡ್ ಹಾಗೂ ಮಾಣಿ ಬಿಜೆಪಿ ಶಕ್ತಿ ಕೇಂದ್ರ ಇಂತಹ ಜನಪರ ಕಾರ್ಯಕ್ರಮ ಮಾಡಿದೆ ಎಂದು ಅಭಿನಂದನೆ ಸಲ್ಲಿಸಿದರು.

ಬಂಟ್ವಾಳ ಕ್ಷೇತ್ರದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತ್ರತ್ವದಲ್ಲಿ ಕೊರೊನಾ ಸೊಂಕಿತರ ಪ್ರತಿ ಮನೆಗೆ ಕಿಟ್ ನೀಡುವ ಕೆಲಸ ಆಗಿದೆ ಅದರ ಜೊತೆಯಲ್ಲಿ ಅರ್ಥಿಕ ವಾಗಿ ಬಡವರಾಗಿದ್ದು ಸಂಕಷ್ಟದ ಲ್ಲಿರುವ ಅನೇಕ ಮನೆಗಳಿಗೆ ಸಹಾಯ ಮಾಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ನ ಮ್ಯಾನೇಜರ್ ಶೇಖ್ ಪರ್ಹನ್ , ವೀರಕಂಭ ಗ್ರಾ‌ಪಂ ಅದ್ಯಕ್ಷ ದಿನೇಶ್, ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಅದ್ಯಕ್ಷ ರೇಶ್ಮಾಶಂಕರ್, ಅನಂತಾಡಿ ಗ್ರಾಮ ಪಂಚಾಯತ್ ಅದ್ಯಕ್ಷ ಗಣೇಶ್ ನೆಟ್ಲಮುಡ್ನೂರು ಗ್ರಾ‌ಪಂ ಅದ್ಯಕ್ಷ ಸತೀಶ್,ಉಪಾಧ್ಯಕ್ಷ ನಾಗೇಶ್ ಶೆಟ್ಟಿ,

ಬಿಜೆಪಿ ಪ್ರಮುಖರಾದ ಸಂದೇಶ ಶೆಟ್ಟಿ ,ರವೀಶ್ ಶೆಟ್ಟಿ ಕರ್ಕಳ, ಪುಷ್ಪರಾಜ ಶೆಟ್ಟಿ ಮಾಣಿ, ಚಂದ್ರಶೇಖರ್ ಕಲ್ಮಲೆ, ವಿಷ್ಣು ಭಟ್ ಅಡ್ಯೆಯಿ,ಕೊರಗಪ್ಪ ಗೌಡ ಅಡ್ಯೆಯಿ, ಜಯಪ್ರಸಾದ್, ಸಂದೀಪ್, ಗೀತಾಚಂದ್ರಶೇಖರ್, ಜಯಂತಿ, ರಮನಾಥ ರಾಯಿ, ಸನತ್ ರೈ ಅನಂತಾಡಿ, ಮೋನಪ್ಪ ದೇವಸ್ಯ ಮತ್ತಿತರರು ಉಪಸ್ಥಿತರಿದ್ದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...