ಬಂಟ್ವಾಳ: ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘ. ನಿ.ಇದರ ಅಧ್ಯಕ್ಷ ಜಿ.ಆನಂದ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮೃತರ ಅಕಾಲಿಕ ಮರಣಕ್ಕೆ ಜಿಲ್ಲಾ ಉಸ್ತವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಂತಾಪ ಸೂಚಿಸಿದರು.


ಅಲ್ಪಕಾಲದ ಅಸೌಖ್ಯದಿಂದ ಮೃತರಾದ ಜಿ.ಆನಂದ ಅವರ ಪಾರ್ಥಿವ ಶರೀರ ತುಂಬೆ ಖಾಸಗಿ ಆಸ್ಪತ್ರೆ ಯಲ್ಲಿದ್ದು ನಾಳೆ ಬೆಳಿಗ್ಗೆ 10.30 ವೇಳೆ ಅಂತಿಮ ಯಾತ್ರೆ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಸರಕಾರದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅವರು ಇಂದು ಸಂಜೆ ಖಾಸಗಿ ಆಸ್ಪತ್ರೆ ಗೆ ಬೇಟಿ ಜಿ.ಆನಂದ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಸೋಮಪ್ಪ ಕೋಟ್ಯಾನ್ ತುಂಬೆ, ಗಣೇಶ್ ಸುವರ್ಣ ತುಂಬೆ, ಮತ್ತು ಪಕ್ಷದ ಪ್ರಮುಖರು ಹಾಗೂ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

