Monday, January 26, 2026

ಕೊಕ್ಕಡ: ಮಕ್ಕಳ ಶಾಲಾ ಬಸ್ ಪಲ್ಟಿ

ಕೊಕ್ಕಡ: ಕೊಕ್ಕಡದಲ್ಲಿ ಬಸ್ ಪಲ್ಟಿಯಾಗಿ ಶಾಲಾ ಮಕ್ಕಳು ಗಾಯಗೊಂಡು ಆಸ್ಪತ್ರೆ ಗೆ ದಾಖಲಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಕೊಕ್ಕಡ ಸಮೀಪದ ಕಾಪಿನಬಾಗಿಲಿನ ಬಳಿ ಎಂಬಲ್ಲಿ ಪ್ರವಾಸಕ್ಕೆಂದು ಬಂದ ಮಕ್ಕಳ ಶಾಲಾ ಬಸ್ ಪಲ್ಟಿಯಾದ ಘಟನೆ ನಡೆದಿದೆ.
ಘಟನೆಯಲ್ಲಿ 13 ವಿದ್ಯಾರ್ಥಿಗಳ ಸಹಿತ ಇಬ್ಬರು ಶಿಕ್ಷಕರು ಗಾಯಗೊಂಡಿದ್ದಾರೆ.
ಧರ್ಮಸ್ಥಳ ಹಾಗೂ ಬೇಲೂರು ಪ್ರವಾಸಕ್ಕೆಂದು ಬಂದ ಬೆಳಗಾವಿ ಮೂಲದ ಶಾಲಾ ಮಕ್ಕಳು. ಧರ್ಮಸ್ಥಳ ದಿಂದ ಬೇಲೂರು ಕಡೆ ಹೋಗುವ ದಾರಿಯಲ್ಲಿ ಘಟನೆ ನಡೆದಿದೆ.
40 ವಿದ್ಯಾರ್ಥಿಗಳ ಬಸ್ ಪ್ರವಾಸಕ್ಕೆಂದು ಹೊರಟಿತ್ತು.
ಬೆಳಗಾವಿ ಮೂಲದ ಹುಕ್ಕೆರಿ ತಾಲೂಕಿನ ಎಮಕನಮರಡಿ ಶಾಲಾ ಮಕ್ಕಳ ಬಸ್, ಎದುರಿಗೆ ಬಂದ ಕಾರನ್ನು ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ.
ಅದೃಷ್ಠವಶಾತ್ ಬಸ್ ನಲ್ಲಿದ್ದ ಶಾಲಾ ಮಕ್ಕಳು ಸಣ್ಣ ಪುಟ್ಟ ಗಾಯಗಳೊಂದಿಗೆ ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.13 ಮಕ್ಕಳು ಸೇರಿ 2 ಶಿಕ್ಷಕರಿಗೆ ಗಾಯಗಳಗಿವೆ. ಗಾಯಗೊಂಡ ಶಾಲಾ ಮಕ್ಕಳ ಸಹಿತ ಶಿಕ್ಷಕರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಾಲಿಸಲಾಗಿದೆ. ಉಪ್ಪಿನಂಗಡಿ ಎಸ್ ಐ ಈರಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...