Friday, June 27, 2025

ಕೊಳ್ನಾಡು: ಕೆ.ಎಸ್.ಆರ್.ಟಿ.ಸಿ.ಬಸ್ಸು ಸಂಚಾರಕ್ಕೆ ಮನವಿ

ವಿಟ್ಲ: ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್ ಹಾಗೂ ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲುರವರ ನೇತೃತ್ವದ ನಿಯೋಗ ಪುತ್ತೂರು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ಕಚೇರಿಗೆ ಭೇಟಿ ನೀಡಿದ ಕೊಳ್ನಾಡು ಗ್ರಾಮಕ್ಕೆ ಕನ್ಯಾನದಿಂದ ಸಂಪರ್ಕ ಕಲ್ಪಿಸುವ ಕೆ.ಎಸ್.ಆರ್.ಟಿ.ಸಿ.ಬಸ್ಸು ಸೌಕರ್‍ಯ ಒದಗಿಸಲು ಮನವಿ ಮುಖಾಂತರ ಒತ್ತಾಯಿಸಿದರು ಮತ್ತು ಈ ಹಿಂದೆ ಗ್ರಾಮ ಸಭೆಯಲ್ಲಿ ಸಲ್ಲಿಸಿದ ಬೇಡಿಕೆ ಮಂಗಳೂರು, ಮುಡಿಪು, ಸಾಲೆತ್ತೂರು ಮೂಲಕ ಪುತ್ತೂರು ಸಾಗುವ ಬಸ್ಸು ಒದಗಿಸುವ ಬೇಡಿಕೆಯ ಪ್ರಗತಿ ಬಗ್ಗೆ ತಿಳಿಸಿದ ವಿಭಾಗೀಯ ನಿಯಂತ್ರಣಾಧಿಕಾರಿ ದೀಪಕ್ ಶೀಘ್ರದಲ್ಲಿ ಪ್ರಾಧಿಕಾರದಿಂದ ಪರವಾನಿಗೆ ದೊರಕಲಿದೆ. ಅನಂತರ ಬಸ್ಸು ಸೌಕರ್ಯ ಒದಗಿಸಲಾಗುವುದು ಮತ್ತು ಸದ್ರಿ ಮನವಿಯಲ್ಲಿರುವ ಕರೋಪಾಡಿ ಕನ್ಯಾನ ಕುಡ್ತಮುಗೇರು ಸೆರ್ಕಳ ಕಲ್ಲಡ್ಕ ಬಿ.ಸಿರೋಡ್ ಹಾಗೂ ಕರೋಪಾಡಿ ಕನ್ಯಾನ ಕುಳಾಲು ಸಾಲೆತ್ತೂರು ಮಂಚಿ ಬಿ.ಸಿರೋಡ್ ಹೊಸ ಮಾರ್ಗ ಅಲ್ಲದೆ ಈಗಾಗಲೇ ಇರುವ ಕೋಡಪದವು ಶರವು ಮದಕ ಬಸ್ಸನ್ನು ತಾಳಿತ್ತನೂಜಿಯವರೆಗೆ ವಿಸ್ತರಿಸುವುದಲ್ಲದೇ ಕೋಡಪದವು ಮಜ್ಜೋನಿ ಕುಡ್ತಮುಗೇರು ಬಸ್ಸು ರದ್ದಾಗಿರುವುದನ್ನು ಪುನರಾರಂಭಿಸುವುದಕ್ಕೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯ ಪವಿತ್ರ ಪೂಂಜ, ಟಿ. ಯೂಸುಫ್ ಉಪಸ್ಥಿತರಿದ್ದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...