ವಿಟ್ಲ: ಕೊಳ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಮಠ ಪ.ಜಾತಿ ಕಾಲೊನಿಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಹಾಗೂ ಪೌಷ್ಠಿಕ ತೋಟ ರಚನೆ ಬಗ್ಗೆ ಮಾಹಿತಿ ಕಾರ್ಯಕ್ರಮ ಹಾಗೂ ಸೆಪ್ಟೆಂಬರ್ ತಿಂಗಳ ಮಾಸಿಕ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಡುಮಠ ಕಾಲೊನಿ ಗುರಿಕಾರರಾದ ಗೋಪಾಲ ಕಾಡುಮಠ ವಹಿಸಿಕೊಂಡಿದ್ದರು. ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಶಿವಾನಂದ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು ಹಾಗೂ ನರೇಗಾ ಯೋಜನೆಯ ಅಭಿಯಂತರರಾದ ನಳಿನಾಕ್ಷಿ ಉದ್ಯೋಗ ಖಾತರಿ ಯೋಜನೆ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ತಾಲೂಕು ಪಂಚಾಯಿತಿ ಸದಸ್ಯರಾದ ನಾರಾಯಣ ಶೆಟ್ಟಿ ಕುಲ್ಯಾರು, ಮಾಜಿ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಯೋಜನೆಯ ಮಾಹಿತಿ ಪಡಕೊಂಡರು. ಪಿಡಿಒ ರೋಹಿಣಿ, ಕಾರ್ಯದರ್ಶಿ ಆಯಿಷಾ ಬಾನು ಉಪಸ್ಥಿತರಿದ್ದರು.














