ಬಂಟ್ವಾಳ: ಕೊರೋನಾ ಸಂಬಂಧ ದ.ಕ. ಡಿಸಿ ಕಚೇರಿಯಲ್ಲಿ ಜಿಲ್ಲಾ ಉಸ್ತವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಯಿತು.

ಫಸ್ಟ್ ನ್ಯೂರೋ ಕೋರೋನಾ ಸೋಂಕು ಮೂಲ ಪತ್ತೆ ಹಚ್ಚಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ.
ವಲಸೆ ಕಾರ್ಮಿಕರಿಗೆ ಉಚಿತ ಬಸ್: ಗುರುವಾರ ಕೊನೆಯ ದಿನವಾಗಿದೆ
ಸಾರ್ವಜನಿಕರ ಬೇಡಿಕೆ ಮೇರೆಗೆ ಜಿಲ್ಲೆಯಲ್ಲಿ ಗುರುವಾರದಿಂದ ಎಲ್ಲಾ ರೀತಿಯ ವಸ್ತ್ರದ ಬಟ್ಟೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಈ ಬಟ್ಟೆ ಅಂಗಡಿಗಳಲ್ಲಿ ಟ್ರಯಲ್ ರೂಂಗಳನ್ನು ಕಡ್ಡಾಯವಾಗಿ ಮುಚ್ಚಬೇಕು.
ವಿವಾಹ: ಅಂತರ್ಜಿಲ್ಲಾ ಪಾಸು ಜಿಲ್ಲೆಯಲ್ಲಿ ವಿವಾಹ ಕಾರ್ಯಕ್ರಮ ನಡೆಸುವವರಿಗಾಗಿ ಅಂತರ ಜಿಲ್ಲೆ ಪ್ರಯಾಣಿಸುವ ಟೂ ವೇ ಪಾಸ್ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ವಿವಾಹ ಕಾರ್ಯಕ್ರಮಕ್ಕೆ ಗರಿಷ್ಠ 25 ಜನರಿಗೆ ಸೀಮಿತಗೊಳಿಸಿ ನಡೆಸಲು ಸಭೆಯಲ್ಲಿ ಸೂಚಿಸಲಾಯಿತು.

