Saturday, January 31, 2026

ಕಾರು ಡಿಕ್ಕಿ : ಹಿರಿಯ ಸಾಹಿತಿ ಕೋಟೇಶ್ವರ ಸೂರ್ಯನಾರಾಯಣ ರಾವ್ ನಿಧನ

ಮಂಗಳೂರು: ಶಿರಾಡಿ ಸಮೀಪದ ಪುಲ್ಲೋಟೆ ಎಂಬಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಬಸ್​ನಿಂದ ಬಹಿರ್ದೆಸೆಗೆಂದು ಕೆಳಗಿಳಿದಿದ್ದ ಹಿರಿಯ ಸಾಹಿತಿ ಕೋಟೇಶ್ವರ ಸೂರ್ಯನಾರಾಯಣ ರಾವ್ ಮೃತಪಟ್ಟಿದ್ದಾರೆ.

ಕುಂದಾಪುರದಲ್ಲಿ ನಡೆಯಬೇಕಿದ್ದ ಒಂದು ಕಾರ್ಯಕ್ರಮ ನಿಮಿತ್ತ ಬೆಂಗಳೂರಿನಿಂದ ಬಸ್ಸಿನಲ್ಲಿ ಬರುತ್ತಿದ್ದರು. ಬಸ್ ಶಿರಾಡಿ ಸಮೀಪದ ಪುಲ್ಲೊಟೆ ಎಂಬಲ್ಲಿ ನಿಲ್ಲಿಸಿದ ಸಂದರ್ಭದಲ್ಲಿ ಸೂರ್ಯನಾರಾಯಣ ರಾವ್ ಅವರು ಬಹಿರ್ದೆಸೆಗೆ ಬಸ್ಸಿನಿಂದ ಹೊರಗಡೆ ಇಳಿದಿದ್ದರು ಎನ್ನಲಾಗ್ತಿದೆ. ಈ ವೇಳೆ ವೇಗವಾಗಿ ಬಂದ ಕಾರೊಂದು ಸೂರ್ಯನಾರಾಯಣ ರಾವ್ ಅವರಿಗೆ ಡಿಕ್ಕಿ ಹೊಡೆದಿದೆ.

ಅನಂತರ ತೀವ್ರವಾಗಿ ಗಾಯಗೊಂಡ ಇವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...