Wednesday, June 25, 2025

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿ. ನೇಮಕ

ಬೆಂಗಳೂರು: ಉಪ ಚುನಾವಣೆ ಫಲಿತಾಂಶದ ಬಳಿಕ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ರಾಜ್ಯ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಮುನ್ನಡೆಸುವವರು ಯಾರು ಎಂಬ ಚರ್ಚೆ ಆರಂಭವಾಗಿತ್ತು. ಇದೀಗ ಎಲ್ಲದಕ್ಕೂ ಉತ್ತರ ಸಿಕ್ಕಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ, ಕನಕಪುರ ಶಾಸಕ ಡಿ. ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಿಸಿದೆ. ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ಅವರನ್ನು ನೇಮಿಸಲಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿಳಿಸಿದೆ.
ಎಐಸಿಸಿ ಬುಧವಾರ ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. ಮಧುಸೂದನ್ ಮಿಸ್ತ್ರಿ ನೇತೃತ್ವದ ಹೈಕಮಾಂಡ್ ನಾಯಕರ ನಿಯೋಗ ರಾಜ್ಯಕ್ಕೆ ಆಗಮಿಸಿ ಕೆಪಿಸಿಸಿ ಅಧ್ಯಕ್ಷರು ಯಾರಾಗಬೇಕು? ಎಂದು ವಿವಿಧ ನಾಯಕರ ಅಭಿಪ್ರಾಯ ಸಂಗ್ರಹ ಮಾಡಿತ್ತು.

More from the blog

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...