Thursday, June 26, 2025

ವಿಟ್ಲ: ಕೋಟಿ-ಚೆನ್ನಯ ಬಿಲ್ಲವ ಕ್ರೀಡಾಕೂಟ

ವಿಟ್ಲ: ವಿಟ್ಲ ಬಿಲ್ಲವ ಸಂಘ ಮತ್ತು ಮಹಿಳಾ ಘಟಕದ ವತಿಯಿಂದ ಭಾನುವಾರ ವಿಟ್ಲ ವಿಠಲ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಕೋಟಿ-ಚೆನ್ನಯ ವಾರ್ಷಿಕ ಕ್ರೀಡಾಕೂಟ ನಡೆಯಿತು.
ಕ್ರೀಡಾಕೂಟವನ್ನು ವಿಟ್ಲ ಬಿಲ್ಲವ ಸಂಘದ ಅಧ್ಯಕ್ಷ ಜಗದೀಶ ಪಾಣೆಮಜಲು ಉದ್ಘಾಟಿಸಿ ಕ್ರೀಡಾಕೂಟದೊಂದಿಗೆ ಸಂಘಟನಾ ಶಕ್ತಿಯನ್ನು ಹೆಚ್ಚಿಸಿಕೊಂಡು ಮುನ್ನಡೆಯಬೇಕು ಎಂದು ತಿಳಿಸಿದರು.
ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಡಾ. ಗೀತಪ್ರಕಾಶ್ ಮಾತನಾಡಿ ಪ್ರತಿಯೊಬ್ಬರೂ ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಂಡಾಗ ಮಾತ್ರ ಕ್ರೀಡಾಕೂಟಗಳು ಅರ್ಥಪೂರ್ಣವೆನಿಸುವುದು. ಬಿಲ್ಲವ ಸಮಾಜದ ಯುವಶಕ್ತಿ ಇಂತಹ ಕಾರ್‍ಯಕ್ರಮಗಳಲ್ಲಿ ಭಾಗಿಗಳಾದಾಗ ಮಾತ್ರ ಸಂಘಟನೆ ಸದೃಢವಾಗಿ ಬೆಳೆಯಬಹುದು ಎಂದರು.
ಈ ಸಂದರ್ಭದಲ್ಲಿ ಮಹಿಳಾ ಘಟಕದ ನಿಕಟಪೂರ್ವ ಅಧ್ಯಕ್ಷೆ ಸುಜಾತ ಸಂಜೀವ ಪೂಜಾರಿ, ಪುಷ್ಪಾ ಸುಂದರ ಪೂಜಾರಿ ಉಕ್ಕುಡ, ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ, ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ ಸುವರ್ಣ, ನಿರ್ದೇಶಕರಾದ ಮಾಧವ ಪಟ್ಲ, ರಮೇಶ್ ಕುಮಾರ್ ಆರ್.ಎಸ್., ಕ್ರೀಡಾ ಕಾರ್‍ಯದರ್ಶಿ ಜಯಪ್ರಕಾಶ್ ಪಾಣೆಮಜಲು, ಉದ್ಯಮಿ ಹರೀಶ್ ವಿಟ್ಲ, ಬಿಲ್ಲವ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್‍ಯನಿರ್ವಹಣಾಧಿಕಾರಿ ಜಯಂತ ಪಿ. ಸ್ವಾಗತಿಸಿದರು. ನಿರ್ದೇಶಕ ಸಂಜೀವ ಎಂ. ಕಾರ್‍ಯಕ್ರಮ ನಿರೂಪಿಸಿ ವಂದಿಸಿದರು.
ಸಭೆಯ ಬಳಿಕ ಮಕ್ಕಳ ವಿಭಾಗ, ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ನಾನಾ ತಂಡ ಹಾಗೂ ವೈಯಕ್ತಿಕ ಆಟೋಟಗಳು ನಡೆದವು.

More from the blog

ಸತತ 3ನೇ ಬಾರಿಗೆ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಕೀರ್ತಿ ಆಯ್ಕೆ..

ವಿಟ್ಲ : ವಿಟ್ಲ ಪಡೂರು ಗ್ರಾಮದ ಕುಕ್ಕಿಲ ಮನೆ ಶ್ರೀಮತಿ ವನಿತಾ ಲಕ್ಷ್ಮಣ ಗೌಡ ದಂಪತಿಯ ಪುತ್ರಿ ಕೀರ್ತಿ ಇವರು ಸತತ 3ನೇ ಬಾರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಮಾದರಿ ಹಿರಿಯ ಪ್ರಾಥಮಿಕ...

Crop Insurance : ಅಡಿಕೆ, ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಿಮಿಯಂ ಪ್ರಾರಂಭ..

ಬಂಟ್ವಾಳ : ಕರಾವಳಿಯ ದಕ್ಸಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯಲ್ಲಿ ತೋಟಾಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿದ...

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆಗೆ ಪ್ರಭಾಕರ ಪ್ರಭು ಆಗ್ರಹ..

ಬಂಟ್ವಾಳ : ರಾಜ್ಯದ ವಸತಿ ಇಲಾಖೆಯ ಅಧಿನದಲ್ಲಿರುವ ರಾಜೀವ ಗಾಂಧಿ ವಸತಿ ನಿಗಮದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಗಳ ಬಗ್ಗೆ ಆಡಳಿತ ಪಕ್ಷದ ಕಾಂಗ್ರೆಸ್ ಶಾಸಕರಾದ ಬಿ. ಆರ್. ಪಾಟೀಲ್ ಯವರು ವಸತಿ ಸಚಿವರಾದ ಜಮೀರ್...

Railway – ರೈಲು ಪ್ರಯಾಣಿಕರಿಗೆ ದರ ಏರಿಕೆ ಬಿಸಿ.. ಜುಲೈ 1ರಿಂದ ಟಿಕೆಟ್ ದರ ಹೆಚ್ಚಳ!

ಭಾರತೀಯ ರೈಲ್ವೆ ಪ್ರಯಾಣ ದರವನ್ನು ಹೆಚ್ಚಿಸಲು ಸಿದ್ಧವಾಗಿದ್ದು, ಜುಲೈ 1 ರಿಂದ ಜಾರಿಗೆ ಬರಲಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ನಾನ್-AC ಮೇಲ್/ಎಕ್ಸ್‌ಪ್ರೆಸ್ ರೈಲುಗಳ ದರವು ಪ್ರತಿ ಕಿಲೋಮೀಟರ್‌ಗೆ 1 ಪೈಸೆ ಹೆಚ್ಚಾಗಲಿದೆ. AC...