Friday, June 27, 2025

ಬಂಟ್ವಾಳ ತಾಲ್ಲೂಕು ಮಟ್ಟದ ಕ್ರೀಡಾಕೂಟ-ಕ್ರೀಡಾಂಗಣ ಉದ್ಘಾಟನೆ ಅ. 23-24ರಂದು

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಬಂಟ್ವಾಳ ತಾಲ್ಲೂಕು ಪಂಚಾಯಿತಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಹಾಗೂ ಕೇಪು ಕಲ್ಲಂಗಳ ಸರ್ಕಾರಿ ಪ್ರೌಢ ಶಾಲೆಯ ವತಿಯಿಂದ ಬಂಟ್ವಾಳ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟ ಹಾಗೂ ನೂತನವಾಗಿ ನಿರ್ಮಾಣಗೊಂಡ ಕ್ರೀಡಾಂಗಣ ಉದ್ಘಾಟನಾ ಸಮಾರಂಭ ಇದೇ 23 ಮತ್ತು 24ರಂದು ನಡೆಯಲಿದೆ ಎಂದು ತಾಲ್ಲೂಕು ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಚೆಲ್ಲಡ್ಕ ತಿಳಿಸಿದರು.


ಅವರು ಸೋಮವಾರ ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೂತನ ಕ್ರೀಡಾಂಗಣ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕ್ರೀಡಾಜ್ಯೋತಿ ಸ್ವೀಕಾರ ಮಾಡಲಿದ್ದಾರೆ. ಮಂಗಳೂರು ಶಾಸಕ ಯು.ಟಿ ಖಾದರ್ ಧ್ವಜಾರೋಹಣಗೈಯ್ಯಲಿದ್ದಾರೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸಭಾಪತಿ ಕೆ ಪ್ರತಾಪಚಂದ್ರ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಬಿ.ಎಂ ಪಾರೂಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್‌ಎಲ್ ಭೋಜೇ ಗೌಡ, ದಕ್ಷಿಣ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಕಸ್ತೂರಿ ಪಂಜ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೆರ, ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ, ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೊಡಂದೂರು ಮೊದಲಾದವರು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಉದಯಕುಮಾರ್ ಚೌಟ ಮಾಣಿ ಬಹುಮಾನ ವಿತರಿಸಲಿದ್ದಾರೆ. ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ಕ್ಯಾಂಪ್ಕೋ ಅಧ್ಯಕ್ಷ ಎಸ್‌ಆರ್ ಸತೀಶ್ಚಂದ್ರ, ಉದ್ಯಮಿ ಸುಬ್ರಾಯ ಪೈ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ ಕುಕ್ಕೆಬೆಟ್ಟು, ಎಸ್‌ಡಿಎಂಸಿ ಕಾಯಾಧ್ಯಕ್ಷ ಬಾಲಚಂದ್ರ ಕಟ್ಟೆ, ಶಾಲಾ ಮುಖ್ಯ ಶಿಕ್ಷಕಿ ಮಾಲತಿ, ಬಾಲಕೃಷ್ಣ ಕಾರಂತ ಎರುಂಬು ಪುಸ್ಪಾಕರ ರೈ, ಜಿನಚಂದ್ರ ಉಪಸ್ಥಿತರಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...