Friday, June 27, 2025

ಭತ್ತದ ಕೃಷಿಗೆ ಪ್ರೋತ್ಸಾ ಹ ನೀಡುವ ಕಾರ್ಯ ಶ್ಲಾಘನೀಯ -ಡಾ.ರಾಜೇಂದ್ರ ಕೆ.ವಿ. ಪತ್ರಕರ್ತರಿಂದ ಭತ್ತದ ಪೈರು ಕೊಯ್ಲು

ವಿಟ್ಲ: ಜಿಲ್ಲೆಯಲ್ಲಿ ಬತ್ತದ ಕೃಷಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪತ್ರಕರ್ತರು ಬತ್ತದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜನರಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಅವರು ಇಂದು ವಿಟ್ಲ ಮಿತ್ತಳಿಕೆ ಯ ತಿಮಾರು ಗದ್ದೆಯಲ್ಲಿಂದು ಭತ್ತದ ಕೃಷಿ ಜಾಗೃತಿ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ, ಬಂಟ್ವಾಳ ತಾಲೂಕು ಕಾರ್ಯ ನಿರತ ಪತ್ರಕ ರ್ತರ ಸಂಘ ಹಾಗೂ ಮಿತ್ತಳಿಕೆ ಕು ಟುಂಬದ ಸಹಯೋಗ ದೊಂದಿಗೆ ಭತ್ತದ ಪೈರು ಕಾ ರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಕಡಿಮೆಯಾಗುತ್ತಿರುವ ಬತ್ತದ ಕೃಷಿಗೆ ಈ ಬಾರಿ ಹಡೀಲು ಭೂಮಿ ಕೃಷಿ ಯ ಮೂಲಕ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ.ಈ ನಿಟ್ಟಿನಲ್ಲಿ ಸಾಮೂಹಿಕ ಪ್ರಯತ್ನ ಅಗತ್ಯ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಿತ್ತಳಿಕೆ ಕುಟುಂಬದ ಹಿರಿಯರಾದ ಸಂಕಪ್ಪ ಶೇಖ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ,ಮಿತ್ತಳಿಕೆ ಕುಟುಂಬದ ಸದಸ್ಯರಾದ ಸರಸ್ವತಿ ಆಳ್ವ,ದಯಾನಂದ ಆಳ್ವ,ಸೂರ್ಯ ನಾಥ ಆಳ್ವ,ವಿಜಯ ಶಂಕರ ಆಳ್ವ,ಸೂರ್ಯ ವಂಶ ಫೌಂಡೇಶನ್ ನ ಅಧ್ಯಕ್ಷ ಗೋವರ್ಧನ ರಾವ್ ,ದ.ಕ ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರು ಮತ್ತು ಪದಾಧಿಕಾರಿಗಳಾದ ಪುಷ್ಪರಾಜ್ ಬಿ.ಎನ್, ಜಿತೇಂದ್ರ ಕುಂದೇಶ್ವರ,ಸತ್ಯವತಿ ,ಹರೀಶ್ ಮೋಟು ಕಾನ,ದಯಾ ಕುಕ್ಕಾಜೆ,ಸುಖ್ ಪಾಲ್ ಪೊಳಲಿ, ಮೊದಲಾದ ವರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಬತ್ತದ ಕೃಷಿ ಕಾರ್ಮಿಕರಿಗೆ ಜಿಲ್ಲಾಧಿಕಾರಿ ಸಾಂಕೇತಿಕವಾಗಿ ಅಕ್ಕಿ ವಿತರಿಸಿದರು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

K. Annamalai – ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಣ್ಣಾಮಲೈ ಆಯ್ಕೆ..

ಅಣ್ಣಾ ಮಲೈಯವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಬಿಜೆಪಿಯಲ್ಲಿ ಅಣ್ಣಾ ಮಲೈ ಅವರು ಪಾಪ್ಯುಲರ್ ಆಗಿದ್ದು, ಯುವ ಕಾರ್ಯಕರ್ತರ ಮನಸ್ಸು ಗೆದ್ದಿರುವ ನಾಯಕನಾಗಿ ಮಿಂಚುತ್ತಿದ್ದಾರೆ. ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರಾಗಿದ್ದ ಇವರು...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...